
ವೀರೇಶ ಉಪ್ಪಲದೊಡ್ಡಿ
ಸಿಂಧನೂರು: ‘ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ನಡೆಸಿದ್ದಾರೆ ಎಂದು ಸಚಿವ ಆರ್.ಬಿ.ತಿಮ್ಮಾಪುರ ಅವರ ವಿರುದ್ಧ ಬಿಜೆಪಿ ನಾಯಕರು ವಿನಾಃಕಾರಣ ಸುಳ್ಳು ಆರೋಪ ಮಾಡುತ್ತಿರುವುದನ್ನು ಸಹಿಸುವುದಿಲ್ಲ’ ಎಂದು ಮಾದಿಗ ಸಮಾಜದ ಮುಖಂಡ ವೀರೇಶ ಉಪ್ಪಲದೊಡ್ಡಿ ಹೇಳಿದರು.
ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,‘ಎಸ್‍ಸಿ, ಎಸ್‍ಟಿ ಸಮುದಾಯದವರು ಹೆಚ್ಚಿನ ಪ್ರಮಾಣದಲ್ಲಿ ಪರವಾನಗಿ ಪಡೆಯುತ್ತಿರುವುದನ್ನು ಸಹಿಸದೆ ಬಾರ್ ಅಸೋಶಿಯೇಷನ್‍ನವರು ಸುಳ್ಳು ಆರೋಪ ಮಾಡುತ್ತಿದ್ದಾರೆ. ಬಿಜೆಪಿ ಪಕ್ಷದ ನಾಯಕರೂ ವಿಧಾನಸಭೆಯಲ್ಲಿ ಪ್ರತಿಭಟಿಸಿ ಗದ್ದಲ ಎಬ್ಬಿಸಿದ್ದಾರೆ. ಮಾದಿಗ ಸಮಾಜದ ಸಚಿವರನ್ನು ಸಚಿವ ಸ್ಥಾನದಿಂದ ಕೆಳಗಿಸಬೇಕು ಎಂಬ ಹುನ್ನಾರ ನಡೆದಿದೆ. ಸುಳ್ಳು ಆರೋಪ ಮಾಡುವುದನ್ನು ಬಿಜೆಪಿಗರು ತಕ್ಷಣವೇ ಕೈ ಬಿಡಬೇಕು’ ಎಂದು ಆಗ್ರಹಿಸಿದರು.
ಮಾದಿಗ ಸಮಾಜದ ಮುಖಂಡರಾದ ಗುರುರಾಜ ಎಸ್.ಮುಕ್ಕುಂದಾ, ಗುರುನಾಥ ಡಿ.ವಕೀಲ, ದುರುಗೇಶ ಬಾಲಿ, ಹನುಮೇಶ ಕರ್ನಿ, ಗಾದಿಲಿಂಗ ಅರಳಹಳ್ಳಿ ಹಾಗೂ ನವೀನ್‍ಕುಮಾರ ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.