ADVERTISEMENT

ಮಾರುಕಟ್ಟೆ ಪುನರಾರಂಭ

​ಪ್ರಜಾವಾಣಿ ವಾರ್ತೆ
Published 13 ಅಕ್ಟೋಬರ್ 2020, 14:06 IST
Last Updated 13 ಅಕ್ಟೋಬರ್ 2020, 14:06 IST
ರಾಯಚೂರಿನ ಉಸ್ಮಾನಿಯಾ ತರಕಾರಿ ಮಾರುಕಟ್ಟೆ ಮಂಗಳವಾರದಿಂದ ಪುನರಾರಂಭ ಮಾಡಿರುವ ಹಿನ್ನೆಲೆಯಲ್ಲಿ ಶಾಸಕ ಡಾ. ಶಿವರಾಜ ಪಾಟೀಲ ಭೇಟಿ ನೀಡಿ ವ್ಯಾಪಾರಸ್ಥರೊಂದಿಗೆ ಚರ್ಚಿಸಿದರು
ರಾಯಚೂರಿನ ಉಸ್ಮಾನಿಯಾ ತರಕಾರಿ ಮಾರುಕಟ್ಟೆ ಮಂಗಳವಾರದಿಂದ ಪುನರಾರಂಭ ಮಾಡಿರುವ ಹಿನ್ನೆಲೆಯಲ್ಲಿ ಶಾಸಕ ಡಾ. ಶಿವರಾಜ ಪಾಟೀಲ ಭೇಟಿ ನೀಡಿ ವ್ಯಾಪಾರಸ್ಥರೊಂದಿಗೆ ಚರ್ಚಿಸಿದರು   

ರಾಯಚೂರು: ಕೋವಿಡ್ ಹಿನ್ನೆಲೆಯಲ್ಲಿ ಕಳೆದ ಆರು ತಿಂಗಳಿಂದ ಬಂದ್ ಆಗಿದ್ದ ನಗರದ ಉಸ್ಮಾನಿಯಾಯ ತರಕಾರಿ ಮಾರುಕಟ್ಟೆಯನ್ನು ಮಂಗಳವಾರದಿಂದ ಪುನರಾರಂಭಿಸಲಾಗಿದೆ.

ಶಾಸಕ ಡಾ. ಶಿವರಾಜ ಪಾಟೀಲ ಅವರು ಬೆಳಿಗ್ಗೆ ಮಾರುಕಟ್ಟೆಗೆ ಭೇಟಿ ನೀಡಿ ಮುನ್ನಚ್ಚರಿಕೆ ಕ್ರಮಗಳನ್ನು ಪರಿಶೀಲಿಸಿದರು. ಆನಂತರ ಮಾರುಕಟ್ಟೆಯಲ್ಲಿ ಸಂಚರಿಸಿ, ಗುಂಪು ಗುಂಪಾಗಿ ನಿಲ್ಲದೇ ಅಂತರ ಕಾಪಾಡಿಕೊಂಡು ಕೋವಿಡ್ ನಿಯಮ ಪಾಲನೆ ಮಾಡಬೇಕು ಎಂದು ಮನವಿ ಮಾಡಿದರು.

ನಿಯಮ ಉಲ್ಲಂಘಿಸಿದರೆ ಪುನಃ ಮಾರುಕಟ್ಟೆ ಬಂದ್ ಮಾಡುವ ಎಚ್ಚರಿಕೆ ಜಿಲ್ಲಾಧಿಕಾರಿ ನೀಡಿ ಅನುಮತಿ ನೀಡಿದ್ದಾರೆ. ಮಾರುಕಟ್ಟೆ ಪ್ರಾಂಗಣದಲ್ಲಿ ಸಿಸಿ ಕ್ಯಾಮರಾ ಅಳವಡಿಸಿ ಸಾರ್ವಜನಿಕರ ಚಲನವಲನ ಮೇಲೆ ನಿಗಾ ಇರಿಸಲಾಗುವುದು ಎಂದು ಶಾಸಕರು ಮಾಹಿತಿ ನೀಡಿದರು.

ADVERTISEMENT

ನಗರಾಭಿವೃದ್ಧಿ ಪ್ರಾಧೀಕಾರದ ಅಧ್ಯಕ್ಷ ವೈ.ಗೋಪಲರೆಡ್ಡಿ, ಮುಖಂಡರಾದ ರವೀಂದ್ರ ಜಲ್ದಾರ, ಶಶಿರಾಜ ಮಸ್ಕಿ, ಮಹೇಂದ್ರರೆಡ್ಡಿ, ಉಸ್ಮಾನಿಯ ತರಕಾರಿ ವ್ಯಾಪಾರಿಗಳ ಸಂಘದ ಅಧ್ಯಕ್ಷ ಎನ್.ಮಹಾವೀರ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.