ರಾಯಚೂರು: ಪೊಲೀಸ್ ಕಾಲೊನಿ ಪ್ರಾಥಮಿಕ ಶಾಲೆಗಳ ಹೋಬಳಿ ಮಟ್ಟದ ಕ್ರೀಡಾಕೂಟ ನಗರದ ಮಹಾತ್ಮಾ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಿತು.
ಕ್ಷೇತ್ರ ಶಿಕ್ಷಣಾಧಿಕಾರಿ ಈರಣ್ಣ ಕೋಸಗಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ‘ಗೆಲುವು ಜವಾಬ್ದಾರಿ ಹೆಚ್ಚಿಸುತ್ತದೆ, ಸೋಲು ಹಿಂದಿನ ತಪ್ಪುಗಳನ್ನು ಸರಿಪಡಿಸಿಕೊಳ್ಳಲು ಮಾರ್ಗದರ್ಶನ ನೀಡುತ್ತದೆ. ಮಕ್ಕಳು ಸ್ನೇಹಪೂರ್ವಕವಾಗಿ ಕ್ರೀಡೆಗಳಲ್ಲಿ ಭಾಗವಹಿಸಬೇಕು, ಕ್ರೀಡೆಯನ್ನು ಕ್ರೀಡೆಯಾಗಿ ಸ್ವೀಕರಿಸಿ. ತೀರ್ಪುಗಾರರು ನೀಡುವ ತೀರ್ಪು ಗೌರವಿಸಬೇಕು’ ಎಂದು ತಿಳಿಸಿದರು.
ಮುಖ್ಯ ಅತಿಥಿಯಾಗಿದ್ದ ಜಿಲ್ಲಾ ದೈಹಿಕ ಶಿಕ್ಷಣ ಅಧಿಕಾರಿ ರಂಗಸ್ವಾಮಿ, ತಾಲ್ಲೂಕು ದೈಹಿಕ ಶಿಕ್ಷಣ ಪರಿವೀಕ್ಷಕ ಪರಶುರಾಮ ಹುಜರತಿ , ರುಸ್ಮಾ ಜಿಲ್ಲಾ ಘಟಕದ ಅಧ್ಯಕ್ಷ ರಾಜ ಶ್ರೀನಿವಾಸ , ತಾಲ್ಲೂಕು ಅಧ್ಯಕ್ಷ ಎಸ್.ರವಿಕಿಮಾರ ಗೋನಾಳ್ , ಮಲ್ಲೇಶ ನಾಯಕ, ಯಂಕಪ್ಪ ಫಿರಂಗಿ, ಶಂಕರಪ್ಪ ಮಾಲೀಪಾಟೀಲ , ಮ್ಯಾಕ್ಸ್ವೆಲ್ ಶಾಲೆಯ ಅಧ್ಯಕ್ಷ ವೆಂಕಟೇಶ, ಬೇಬಿ ಬಡ್ಸ್೯ ಶಾಲೆಯ ಅಧ್ಯಕ್ಷ ಜಹೀರಬತುಲ್ ಸೇರಿದಂತೆ 20 ಶಾಲೆಗಳ ಮುಖ್ಯಸ್ಥರು ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.