ಮಾನ್ವಿ: ‘ರಾಜ್ಯ ಸರ್ಕಾರ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ವೇತನ ಹೆಚ್ಚಳ ಸೇರಿದಂತೆ ವಿವಿಧ ಭರವಸೆಗಳನ್ನು ಇದುವರೆಗೂ ಜಾರಿಗೊಳಿಸದಿರುವುದನ್ನು ವಿರೋಧಿಸಿ ಸೆ.19ರಂದು ವಿಧಾನಸೌಧ ಚಲೋ ಚಳವಳಿ ಹಮ್ಮಿಕೊಳ್ಳಲಾಗಿದೆ’ ಎಂದು ಎಐಟಿಯುಸಿ ಸಂಘಟನೆಯ ಮುಖಂಡ ಸಂಗಯ್ಯ ಸ್ಚಾಮಿ ಚಿಂಚರಕಿ ಹೇಳಿದರು.
ಸೋಮವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ರಾಜ್ಯ ಸರ್ಕಾರ ಅಂಗನವಾಡಿ ಕಾರ್ಯಕರ್ತೆಯರಿಗೆ, ಸಹಾಯಕಿಯರಿಗೆ, ಆಶಾ ಕಾರ್ಯಕರ್ತೆಯರಿಗೆ, ಬಿಸಿಯೂಟ ಸಿಬ್ಬಂದಿಗೆ ಗ್ರಾಚ್ಯುಟಿ ಸೌಲಭ್ಯ ನೀಡಬೇಕು. ಇಡುಗಂಟು ನೀಡುವ ಯೋಜನೆ ಜಾರಿಯಾಗಬೇಕು. ಅಂಗನವಾಡಿಗಳಲ್ಲೇ ಎಲ್‌ಕೆಜಿ ಮತ್ತು ಯುಕೆಜಿ ಪ್ರಾರಂಭಿಸಬೇಕು. ಅಂಗನವಾಡಿಗಳಿಗೆ ಗುಣಮಟ್ಟದ ಆಹಾರ ಸರಬರಾಜು ಮಾಡಬೇಕು. ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕರ ನೇಮಕಾತಿಯ ವಯೋಮಿತಿ ಹೆಚ್ಚಿಸಲು ಆಗ್ರಹಿಸಲಾಗುವುದು’ ಎಂದರು.
ಅಂಗನವಾಡಿ ಕಾರ್ಯಕರ್ತೆಯರ ಫೆಡರೇಶನ್ ಜಿಲ್ಲಾ ಅಧ್ಯಕ್ಷೆ ಸುಲೋಚನಾ, ಪದಾಧಿಕಾರಿಗಳಾದ ಎಂ.ಬಿ.ಸಿದ್ರಾಮಯ್ಯ ಸ್ವಾಮಿ, ಲಲಿತಾ, ಅಂಬಮ್ಮ, ಆದಿಲಕ್ಷ್ಮಿ, ಚಂದ್ರಶೇಖರ ಕ್ಯಾತ್ನಟ್ಡಿ, ಸರಸ್ವತಿ, ಪುಟ್ಟಮ್ಮ, ಭಾಗ್ಯಮ್ಮ ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.