ADVERTISEMENT

ನ್ಯಾಯಾಲಯದ ಆದೇಶ ಉಲ್ಲಂಘನೆ: ಆರೋಪ

​ಪ್ರಜಾವಾಣಿ ವಾರ್ತೆ
Published 13 ಆಗಸ್ಟ್ 2021, 14:52 IST
Last Updated 13 ಆಗಸ್ಟ್ 2021, 14:52 IST
ಮಹಾಬೋಧಿ ವೃಕ್ಷ ಎಜುಕೇಷನಲ್ ಆ್ಯಂಡ್ ಚಾರಿಟೇಬಲ್ ಟ್ರಸ್ಟ್ ಮುಖಂಡರು ರಾಯಚೂರಿನಲ್ಲಿ ಜಿಲ್ಲಾಡಳಿತ ಕಚೇರಿಗೆ ಮನವಿ ಗುರುವಾರ ಸಲ್ಲಿಸಿದರು
ಮಹಾಬೋಧಿ ವೃಕ್ಷ ಎಜುಕೇಷನಲ್ ಆ್ಯಂಡ್ ಚಾರಿಟೇಬಲ್ ಟ್ರಸ್ಟ್ ಮುಖಂಡರು ರಾಯಚೂರಿನಲ್ಲಿ ಜಿಲ್ಲಾಡಳಿತ ಕಚೇರಿಗೆ ಮನವಿ ಗುರುವಾರ ಸಲ್ಲಿಸಿದರು   

ರಾಯಚೂರು: ನಗರಸಭೆಯ ಪೌರಾಯುಕ್ತ ವೆಂಕಟೇಶ, ಜೈಪಾಲರೆಡ್ಡಿ, ಮೌನೇಶ ಸೇರಿದಂತೆ ಅಧಿಕಾರಿಗಳ ತಂಡವು ಮಹಿಳೆಯು ಹಾಕಿಕೊಂಡಿದ್ದ ತಾತ್ಕಾಲಿಕ ಟಿನ್ ಶೆಡ್‌ನ್ನುನ್ಯಾಯಾಲಯ ಆದೇಶ ಉಲ್ಲಂಘನೆ ಮಾಡಿ ತೆರವುಗೊಳಿಸಿ ದೌರ್ಜನ್ಯ ಎಸಗಿದೆ. ಈ ಅಧಿಕಾರಿಗಳ ಮೇಲೆ ಕ್ರಿಮಿನಲ್ ಪ್ರಕರಣ ದಾಖಲಿಸಬೇಕು ಎಂದು ಒತ್ತಾಯಿಸಿ ಮಹಾಬೋಧಿ ವೃಕ್ಷ ಎಜುಕೇಷನಲ್ ಆ್ಯಂಡ್ ಚಾರಿಟೇಬಲ್ ಟ್ರಸ್ಟ್ ಮುಖಂಡರು ಜಿಲ್ಲಾಡಳಿತ ಕಚೇರಿಗೆ ಗುರುವಾರ ಮನವಿ ಸಲ್ಲಿಸಿದರು.

ನಗರದ ಸದರ್ ಬಜಾರ್ ಪೊಲೀಸ್ ಠಾಣೆಯಲ್ಲಿ ನಗರಸಭೆ ಅಧಿಕಾರಿಗಳ ವಿರುದ್ಧ ದೂರು ದಾಖಲಿಸಿದರೂ ಕ್ರಮ ಕೈಗೊಂಡಿಲ್ಲ. ದೂರುದಾರರಿಗೆ ಅಧಿಕಾರಿಗಳಿಂದ ಪ್ರಕರಣ ಹಿಂಪಡೆಯುವಂತೆ ಒತ್ತಡ ಹಾಗೂ ಬೆದರಿಕೆ ಹಾಕಲಾಗುತ್ತಿದೆ ಎಂದು ಆರೋಪಿಸಿದರು.

ಟ್ರಸ್ಟ್ ಅಧ್ಯಕ್ಷೆ ನಾಗರತ್ನ, ಉಲಾಧ್ಯಕ್ಷೆ ಪ್ರಾಣೇಶ, ಕವಿತಾ, ಚಂದ್ರಶೇಖರ್‌ ಇದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.