ರಾಯಚೂರು: ಸಾರಿಗೆ ನೌಕರರ ಮುಷ್ಕರ ಮುಂದುವರಿದಿದ್ದು, ಶಿಸ್ತು ಉಲ್ಲಂಘನೆ ಆಧರಿಸಿ ಮೂವರು ನೌಕರರನ್ನು ವಜಾಗೊಳಿಸಲಾಗಿದೆ.
‘ನೌಕರರ ವಿವರ ಹಾಗೂ ಡಿಪೋ ಕೂಡಾ ಹೇಳುವುದಕ್ಕೆ ಆಗುವುದಿಲ್ಲ’ ಎಂದು ಎನ್‌ಇಕೆಆರ್‌ಟಿಸಿ ರಾಯಚೂರು ವಿಭಾಗದ ನಿಯಂತ್ರಕ ಎಂ.ವೆಂಕಟೇಶ ತಿಳಿಸಿದರು.
‘ಜಿಲ್ಲೆಯಾದ್ಯಂತ 35 ಸಾರಿಗೆ ಬಸ್‌ಗಳ ಸಂಚಾರ ಆರಂಭಿಸಲಾಗಿದೆ. ತೆಲಂಗಾಣ ಮತ್ತು ಆಂಧ್ರಪ್ರದೇಶ ಸಾರಿಗೆ ಸಂಸ್ಥೆಯ ಅಧಿಕಾರಿಗಳೊಂದಿಗೆ ಮಾತನಾಡಿ ಅಲ್ಲಿಂದ ರಾಯಚೂರಿಗೆ ಹೆಚ್ಚುವರಿ ಬಸ್‌ಗಳನ್ನು ಬಿಡಿಸಲಾಗಿದೆ. ಸುಮಾರು 50 ಹೆಚ್ಚಿನ ಬಸ್‌ಗಳು ಸಂಚರಿಸುತ್ತಿವೆ. ಯುಗಾದಿ ಹಿನ್ನೆಲೆಯಲ್ಲಿ ಶ್ರೀಶೈಲಕ್ಕೆ ಹೋಗುವ ಭಕ್ತರಿಗೆ ಅನುಕೂಲವಾಗುವಂತೆ ಸಂಸ್ಥೆಯಿಂದ 20 ಹೆಚ್ಚುವರಿ ಬಸ್‌ಗಳನ್ನು ಬಿಡಲಾಗಿದೆ’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.