ADVERTISEMENT

ಬೀದರ್‌ನಿಂದ ಬೆಂಗಳೂರಿಗೆ ಶೀಘ್ರವೇ ವಿಶ್ವಕರ್ಮ ಪಾದಯಾತ್ರೆ

​ಪ್ರಜಾವಾಣಿ ವಾರ್ತೆ
Published 8 ಜೂನ್ 2022, 20:11 IST
Last Updated 8 ಜೂನ್ 2022, 20:11 IST

ಮಸ್ಕಿ (ರಾಯಚೂರು ಜಿಲ್ಲೆ): ‘ವಿಶ್ವಕರ್ಮ ಸಮಾಜಕ್ಕೆ ಪರಿಶಿಷ್ಟ ಪಂಗಡ ಮೀಸಲಾತಿ ನೀಡುವಂತೆ ಆಗ್ರಹಿಸಿ ಬೀದರ್‌ನಿಂದ ಬೆಂಗಳೂರಿಗೆ ಶೀಘ್ರವೇ ಪಾದಯಾತ್ರೆ ನಡೆಸಲಾಗುವುದು’ ಎಂದು ವಿಶ್ವಕರ್ಮ ಮಹಾಸಭಾ ವಕ್ತಾರ ಮಾರುತಿ ಬಡಿಗೇರ್ ಅವರು ತಿಳಿಸಿದರು.

‘ರಾಜ್ಯದಲ್ಲಿ 45 ಲಕ್ಷ ವಿಶ್ವಕರ್ಮ ಸಮಾಜದವರಿದ್ದು, ಪರಿಶಿಷ್ಟ ಪಂಗಡ ಮೀಸಲಾತಿ ನೀಡುವಂತೆ ರಾಜ್ಯ ಸರ್ಕಾದ ಮೇಲೆ ಒತ್ತಡ ಹೇರಲಾಗುವುದು’ ಎಂದು ಅವರು ಬುಧವಾರ ಸುದ್ದಿಗಾರರಿಗೆ ತಿಳಿಸಿದರು.

ಮಹಾಸಭಾದ ಕಾರ್ಯದರ್ಶಿ ಬ್ರಹ್ಮಗಣೇಶ ವಕೀಲ ಮಾತನಾಡಿ, ‘ವಿಧಾನ ಪರಿಷತ್ ಸದಸ್ಯ ಕೆ.ಪಿ. ನಂಜುಂಡಿ ಅವರಿಗೆ ಸಚಿವ ಸ್ಥಾನ ನೀಡಬೇಕು. ಸಮಾಜಕ್ಕೆ ನ್ಯಾಯ ದೊರಕಿಸಿಕೊಡಬೇಕು’ ಎಂದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.