ADVERTISEMENT

ಲಿಂಗಸುಗೂರು: ಗೆದ್ದಲಮರಿ ತಾಂಡಾದಲ್ಲಿ ವಾಂತಿ ಭೇದಿ ಉಲ್ಬಣ

​ಪ್ರಜಾವಾಣಿ ವಾರ್ತೆ
Published 9 ಅಕ್ಟೋಬರ್ 2024, 15:54 IST
Last Updated 9 ಅಕ್ಟೋಬರ್ 2024, 15:54 IST
ಲಿಂಗಸುಗೂರು ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾದ ಗೆದ್ದಲಮರಿತಾಂಡಾದ ರೋಗಿಗಳನ್ನು ತಾಲ್ಲೂಕು ಆರೋಗ್ಯಾಧಿಕಾರಿ ಡಾ. ಅಮರೇಶ ಮಾಕಾಪುರ ವಿಚಾರಿಸಿದರು
ಲಿಂಗಸುಗೂರು ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾದ ಗೆದ್ದಲಮರಿತಾಂಡಾದ ರೋಗಿಗಳನ್ನು ತಾಲ್ಲೂಕು ಆರೋಗ್ಯಾಧಿಕಾರಿ ಡಾ. ಅಮರೇಶ ಮಾಕಾಪುರ ವಿಚಾರಿಸಿದರು   

ಲಿಂಗಸುಗೂರು: ತಾಲ್ಲೂಕಿನ ಗೆದ್ದಲಮರಿ ತಾಂಡಾದಲ್ಲಿ ಬುಧವಾರ ಸಂಜೆ ಏಕಾಏಕಿ ವಾಂತಿ ಭೇದಿ ಉಲ್ಬಣಗೊಂಡಿದ್ದು, ತಾಂಡಾ ಜನ ಭಯಭೀತಿಗೆ ಒಳಗಾಗಿದ್ದಾರೆ.

ವಾಂತಿ ಭೇದಿಯಿಂದ 20ಕ್ಕೂ ಹೆಚ್ಚು ಮಕ್ಕಳು, ವಯೋವೃದ್ಧರು ಅನಾರೋಗ್ಯದಿಂದ ಬಳಲುತ್ತಿದ್ದಾರೆ. ಸ್ಥಳೀಯ ಸಾರ್ವಜನಿಕ ಆಸ್ಪತ್ರೆಗೆ 10 ರೋಗಿಗಳು ದಾಖಲಾಗಿದ್ದು, ಉಳಿದವರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದಾರೆ.

ಮಾಹಿತಿ ತಿಳಿಯುತ್ತಿದ್ದಂತೆ ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಅಮರೇಶ ಮಾಕಾಪುರ ಆಸ್ಪತ್ರೆಗೆ ಭೇಟಿ ನೀಡಿ ರೋಗಿಗಳ ಆರೋಗ್ಯ ವಿಚಾರಿಸಿದ್ದಾರೆ. ವಾಂತಿ ಭೇದಿಗೆ ಸ್ಪಷ್ಟ ಕಾರಣ ತಿಳಿದುಬಂದಿಲ್ಲ.

ADVERTISEMENT
ಲಿಂಗಸುಗೂರು ತಾಲ್ಲೂಕು ಗೆದ್ದಲಮರಿತಾಂಡಾದಲ್ಲಿ ಬುಧವಾರ ಉಲ್ಬಣಿಸಿದ ವಾಂತಿ ಭೇದಿಯಿಂದ ಬಳಲಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾದ ರೋಗಿಗಳನ್ನು ತಾಲ್ಲೂಕು ಆರೋಗ್ಯಾಧಿಕಾರಿ ಡಾ. ಅಮರೇಶ ಮಾಕಾಪುರ ವಿಚಾರಿಸಿದರು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.