ADVERTISEMENT

ಲೋಕಸಭೆ ಚುನಾವಣೆ: ಎಲ್ಲರೂ ಮತ ಚಲಾಯಿಸಿ- ಡಿಸಿ

​ಪ್ರಜಾವಾಣಿ ವಾರ್ತೆ
Published 16 ಮಾರ್ಚ್ 2019, 14:35 IST
Last Updated 16 ಮಾರ್ಚ್ 2019, 14:35 IST
ರಾಯಚೂರಿನಲ್ಲಿ ತೃತೀಯ ಲಿಂಗಿಗಳು, ಮಾಜಿ ದೇವದಾಸಿಯರು, ಅಂಗವಿಕಲರು ಶನಿವಾರ ನಡೆಸಿದ ಮತದಾನ ಜಾಗೃತಿ ಅಭಿಯಾನವನ್ನು ಜಿಲ್ಲಾಧಿಕಾರಿ ಬಿ.ಶರತ್‌ ಉದ್ಘಾಟಿಸಿದರು
ರಾಯಚೂರಿನಲ್ಲಿ ತೃತೀಯ ಲಿಂಗಿಗಳು, ಮಾಜಿ ದೇವದಾಸಿಯರು, ಅಂಗವಿಕಲರು ಶನಿವಾರ ನಡೆಸಿದ ಮತದಾನ ಜಾಗೃತಿ ಅಭಿಯಾನವನ್ನು ಜಿಲ್ಲಾಧಿಕಾರಿ ಬಿ.ಶರತ್‌ ಉದ್ಘಾಟಿಸಿದರು   

ರಾಯಚೂರು: ಲೋಕಸಭೆ ಚುನಾವಣೆಯ ಮತದಾನದ ಜಾಗೃತಿ ಮೂಡಿಸಲಾಗುತ್ತಿದ್ದು, ಪ್ರತಿಯೊಬ್ಬ ಮತದಾರರು ಮತ ಚಲಾಯಿಸುವ ಮೂಲಕ ಪ್ರಜಾಪ್ರಭುತ್ವ ಗಟ್ಟಿಗೊಳಿಸಬೇಕಿದೆ ಎಂದು ಜಿಲ್ಲಾಧಿಕಾರಿ ಬಿ.ಶರತ್ ಹೇಳಿದರು.

ಜಿಲ್ಲಾ ಪಂಚಾಯಿತಿಯ ಆವರಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಸ್ವೀಪ್ ಸಮಿತಿಯಿಂದ ಶನಿವಾರ ಆಯೋಜಿಸಿದ್ದ ತೃತೀಯ ಲಿಂಗಿಗಳ, ದೇವದಾಸಿ ಮಹಿಳೆಯರ, ವಿಕಲಚೇತನರ ಹಾಗೂ ಇತರೆ ಸಮುದಾಯದವರ ಮತದಾನ ಜಾಗೃತಿ ಜಾಥಾಕ್ಕೆ ಚಾಲನೆ ನೀಡಿ ಮಾತನಾಡಿದರು.

ಮತದಾನದ ಜಾಗೃತಿಗಾಗಿ ಜಿಲ್ಲೆಯಲ್ಲಿ ಹಲವು ಕಾರ್ಯಕ್ರಮಗಳು ನಡೆಯುತ್ತಿದ್ದು, ಮತದಾರರು ಜಾಗೃತರಾಗಿ ಮತ ಚಲಾಯಿಸಬೇಕು ಎಂದರು.

ADVERTISEMENT

ಇದೇ ವೇಳೆ ಮತದಾನದ ಪ್ರತಿಜ್ಞಾ ವಿಧ ಬೋಧಿಸಲಾಯಿತು. ಜಿಲ್ಲಾ ಪಂಚಾಯಿತಿ ಕಚೇರಿಯಿಂದ ಬಿ.ಆರ್.ಅಂಬೇಡ್ಕರ್‌ ವೃತ್ತದವರೆಗೆ ಜಾಗೃತಿ ಜಾಥಾ ನಡೆಯಿತು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ನಲಿನ್ ಅತುಲ್, ಉಪವಿಭಾಗಾಧಿಕಾರಿ ಶಿಲ್ಪಾ ಶರ್ಮಾ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.