ADVERTISEMENT

ದೇಶದ ದುರ್ಬಲ ಪ್ರಧಾನಿ ಮೋದಿ: ವಿ.ಎಸ್‌.ಉಗ್ರಪ್ಪ

​ಪ್ರಜಾವಾಣಿ ವಾರ್ತೆ
Published 28 ಏಪ್ರಿಲ್ 2025, 0:42 IST
Last Updated 28 ಏಪ್ರಿಲ್ 2025, 0:42 IST
ವಿ.ಎಸ್‌.ಉಗ್ರಪ್ಪ
ವಿ.ಎಸ್‌.ಉಗ್ರಪ್ಪ   

ರಾಯಚೂರು: ‘ಕೇಂದ್ರ ಸರ್ಕಾರದ ಬೇಹುಗಾರಿಕೆ ಹಾಗೂ ರಕ್ಷಣಾ ವ್ಯವಸ್ಥೆಯ ವೈಫಲ್ಯದಿಂದಾಗಿ ಪಹಲ್ಗಾಮ್‌ನಲ್ಲಿ ಅಮಾಯಕರು ಪ್ರಾಣ ಕಳೆದುಕೊಳ್ಳಬೇಕಾಯಿತು. ನರೇಂದ್ರ ಮೋದಿ ದೇಶದ ದುರ್ಬಲ ಪ್ರಧಾನಿ. ಅದಕ್ಕೆ ಮೋದಿ ಆಡಳಿತ ಅವಧಿಯಲ್ಲೇ ಅತಿ ಹೆಚ್ಚು ಉಗ್ರರ ದಾಳಿ ನಡೆದಿವೆ‘ ಎಂದು ಕೆಪಿಸಿಸಿ ಉಪಾಧ್ಯಕ್ಷ ವಿ.ಎಸ್‌.ಉಗ್ರಪ್ಪ ವಾಗ್ದಾಳಿ ನಡೆಸಿದರು.

‘ನರೇಂದ್ರ ಮೋದಿ ಅವಧಿಯಲ್ಲಿ ಎಲ್ಲ ರಂಗದಲ್ಲೂ ವಿಫಲತೆಯನ್ನು ಕಾಣಬಹುದಾಗಿದೆ. 2014ರಿಂದ ಇಲ್ಲಿಯವರೆಗೆ ಉಗ್ರರು 3982 ಬಾರಿ ದಾಳಿ ಮಾಡಿದ್ದಾರೆ. ಅದರಲ್ಲಿ 413 ನಾಗರಿಕರು, 630 ಭದ್ರತಾ ಸಿಬ್ಬಂದಿ ಸಾವನ್ನಪ್ಪಿದ್ದಾರೆ. ಸಾವಿರಾರು ಮಂದಿ ಗಾಯಗೊಂಡಿದ್ದಾರೆ’ ಎಂದು ನಗರದಲ್ಲಿ ಭಾನುವಾರ ಮಾಧ್ಯಮಗೋಷ್ಠಿಯಲ್ಲಿ ಆರೋಪಿಸಿದರು.

‘ಭಾರತೀಯ ಸಂವಿಧಾನದ 21ನೇ ವಿಧಿಯು ಜೀವಿಸುವ ಹಕ್ಕು ಹಾಗೂ ವೈಯಕ್ತಿಕ ಸ್ವಾತಂತ್ರ್ಯವನ್ನು ಪ್ರತಿಪಾದಿಸಿದೆ. ಅದರನ್ವಯ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಜನರ ರಕ್ಷಣೆ ಮಾಡಬೇಕು. ಆದರೆ, ಕೇಂದ್ರ ಸರ್ಕಾರ ಜನರಿಗೆ ರಕ್ಷಣೆ ಒದಗಿಸುವಲ್ಲಿ ವಿಫಲವಾಗಿದೆ’ ಎಂದು ಆರೋಪಿಸಿದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.