ADVERTISEMENT

ಸುಬುಧೇಂದ್ರ ತೀರ್ಥರಿಗೆ ‘ವ್ಯಾದ ದಾಸಯೋಗಿ’ ಪ್ರಶಸ್ತಿ

​ಪ್ರಜಾವಾಣಿ ವಾರ್ತೆ
Published 24 ಫೆಬ್ರುವರಿ 2026, 8:21 IST
Last Updated 24 ಫೆಬ್ರುವರಿ 2026, 8:21 IST
ನಟ ರಾಘವೇಂದ್ರ ರಾಜ್‌ಕುಮಾರ್ ಅವರಿಗೆ ಮಂತ್ರಾಲಯದ ಪೀಠಾಧಿಪತಿ ಸುಬುಧೇಂದ್ರ ತೀರ್ಥರು ಹಾಗೂ ಇತರ ಗಣ್ಯರು ಡಾಕ್ಟರೇಟ್ ಪದವಿ ಪ್ರದಾನ ಮಾಡಿದರು
ನಟ ರಾಘವೇಂದ್ರ ರಾಜ್‌ಕುಮಾರ್ ಅವರಿಗೆ ಮಂತ್ರಾಲಯದ ಪೀಠಾಧಿಪತಿ ಸುಬುಧೇಂದ್ರ ತೀರ್ಥರು ಹಾಗೂ ಇತರ ಗಣ್ಯರು ಡಾಕ್ಟರೇಟ್ ಪದವಿ ಪ್ರದಾನ ಮಾಡಿದರು   

ರಾಯಚೂರು: ಮಂತ್ರಾಲಯದಲ್ಲಿ ಸೋಮವಾರ ಸಂಜೆ ನಡೆದ ಕಾರ್ಯಕ್ರಮದಲ್ಲಿ ಅಮೆರಿಕಾದಲ್ಲಿರುವ ಫ್ಲೋರಿಡಾದ ಯೋಗ ಸಂಸ್ಕೃತ ವಿಶ್ವವಿದ್ಯಾಲಯದ ವತಿಯಿಂದ ಮಠದ ಪೀಠಾಧಿಪತಿ ಸುಬುಧೇಂದ್ರ ತೀರ್ಥರಿಗೆ ‘ವ್ಯಾದ ದಾಸಯೋಗಿ’ ಪ್ರಶಸ್ತಿ ಪ್ರದಾನ ಮಾಡಲಾಯಿತು. 

ಇದೇ ಸಂದರ್ಭದಲ್ಲಿ ರಾಜ ಎಸ್. ಗಿರಿ ಆಚಾರ್ಯ ಅವರಿಗೆ ಸಾಹಿತ್ಯ ಮತ್ತು ಸಾಹಿತ್ಯದ ಡಾಕ್ಟರೇಟ್ ಪದವಿಯನ್ನು ಪ್ರದಾನ ಮಾಡಲಾಯಿತು.

ಸಮಾಜಕ್ಕೆ ನೀಡಿದ ಕೊಡುಗೆಗಳಿಗಾಗಿ ಡಾ.ವಿ.ಜಿ. ಕಿರಣ್ ಕುಮಾರ್ ಮತ್ತು ಮುನಿರಾಜು ಅವರನ್ನು ಪೀಠಾಧಿಪತಿ ಸುಬುಧೇಂದ್ರ ತೀರ್ಥರು ಸನ್ಮಾನಿಸಿದರು.

ADVERTISEMENT

ಇದೇ ಸಂದರ್ಭದಲ್ಲಿ ಸುಬುಧೇಂದ್ರ ತೀರ್ಥರು, ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿ ಶ್ರೀಶಾನಂದ್, ನಟ ರಾಘವೇಂದ್ರ ರಾಜ್‌ಕುಮಾರ್ ಮತ್ತು ಇತರ ಗಣ್ಯರಿಗೆ ಡಾಕ್ಟರೇಟ್ ಪದವಿಯನ್ನು ಪ್ರದಾನ ಮಾಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.