ರಾಯಚೂರು: 'ಭೀಮಾ ನದಿಯಲ್ಲಿ 8 ಲಕ್ಷ ಕ್ಯುಸೆಕ್ ನೀರು ಹರಿಸಲಾಗಿದೆ ಎಂದು ಮಹಾರಾಷ್ಟ್ರದ ನೀರಾವರಿ ಎಂಜಿನಿಯರುಗಳು ತಪ್ಪು ಮಾಹಿತಿ ನೀಡಿದ್ದಾರೆ' ಎಂದು ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಹೇಳಿದರು.
ತಾಲ್ಲೂಕಿನ ಗುರ್ಜಾಪುರ ಬ್ಯಾರೇಜ್‌ಗೆ ಸೋಮವಾರ ಭೇಟಿ ನೀಡಿ ಸುದ್ದಿಗಾರರೊಂದಿಗೆ ಮಾತನಾಡಿದರು.
'ರಾಯಚೂರು ಜಿಲ್ಲಾಧಿಕಾರಿಗೆ 8 ಲಕ್ಷ ಕ್ಯುಸೆಕ್ ನೀರು ಹರಿಸುವ ಬಗ್ಗೆ ಮಾಹಿತಿ ಬಂದಿದ್ದರಿಂದ ಅವರು ಪೂರ್ವತಯಾರಿ ಮಾಡಿಕೊಂಡಿದ್ದರು. ಭೀಮಾ ನದಿಯಿಂದ ಸುಮಾರು 3.5 ಲಕ್ಷ ಕ್ಯುಸೆಕ್ ಮಾತ್ರ ನೀರು ರಾಯಚೂರಿಗೆ ತಲುಪಿದೆ' ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.