ADVERTISEMENT

ನೀರು ನಿರ್ವಹಣೆ ಲೋಪದೋಷವಾಗದಂತೆ ಎಚ್ಚರ ವಹಿಸಿ: ಶಾಸಕ ತುರ್ವಿಹಾಳ ಸೂಚನೆ

​ಪ್ರಜಾವಾಣಿ ವಾರ್ತೆ
Published 16 ಸೆಪ್ಟೆಂಬರ್ 2025, 5:27 IST
Last Updated 16 ಸೆಪ್ಟೆಂಬರ್ 2025, 5:27 IST
ಮಸ್ಕಿ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಸೋಮವಾರ ನಡೆದ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಸಭೆಯಲ್ಲಿ ಶಾಸಕ ಆರ್. ಬಸನಗೌಡ ತುರ್ವಿಹಾಳ ಮಾತನಾಡಿದರು
ಮಸ್ಕಿ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಸೋಮವಾರ ನಡೆದ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಸಭೆಯಲ್ಲಿ ಶಾಸಕ ಆರ್. ಬಸನಗೌಡ ತುರ್ವಿಹಾಳ ಮಾತನಾಡಿದರು   

ಮಸ್ಕಿ: ಕುಡಿಯುವ ನೀರು ನಿರ್ವಹಣೆಯಲ್ಲಿ ಯಾವುದೇ ಲೋಪ ದೋಷಗಳಾಗದಂತೆ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಹಾಗೂ ಎಂಜಿನಿಯರ್‌ಗಳು ಮುಂಜಾಗ್ರತೆ ವಹಿಸಬೇಕು ಎಂದು ಶಾಸಕ, ಖಾದಿ ಗ್ರಾಮೋದ್ಯೋಗ ಮಂಡಳಿ ಅಧ್ಯಕ್ಷ ಆರ್. ಬಸನಗೌಡ ತುರ್ವಿಹಾಳ ಸೂಚಿಸಿದರು.

ಪಟ್ಟಣದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಸೋಮವಾರ ಕುಡಿಯುವ ನಿರ್ವಹಣೆ ಸಭೆಯಲ್ಲಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳನ್ನು ಉದ್ದೇಶಿಸಿ ಅವರು ಮಾತನಾಡಿದರು. ಜಲಜೀವನ ಮಿಷನ್ ಯೋಜನೆಯ ಮನೆ ಮನೆಗೆ ಕುಡಿಯುವ ನೀರು ಸರಬರಾಜು ಕಾಮಗಾರಿ ನಡೆಯುತ್ತಿದೆ. ಕಾಮಗಾರಿಯನ್ನು ಗುತ್ತಿಗೆದಾರರಿಂದ ಸರಿಯಾಗಿ ತೆಗೆದುಕೊಳ್ಳಬೇಕು. ಬೇಜವಾಬ್ದಾರಿ ತೋರಿದರೆ ಅದರ ಹೊಣೆ ನೀವು ಹೊರಬೇಕು ಎಂದು ಎಚ್ಚರಿಸಿದರು. ಗ್ರಾಮಾಂತರ ಪ್ರದೇಶಗಳಲ್ಲಿ ಇರುವ ನೀರಿನ ಕೆರೆಗಳನ್ನು ತುಂಗಭದ್ರಾ ಎಡದಂಡೆ ಕಾಲುವೆ ಮೂಲಕ ತುಂಬಿಸಿಕೊಳ್ಳಬೇಕು. ಕೆಟ್ಟು ನಿಂತ ಶುದ್ಧ ಕುಡಿಯುವ ನೀರಿನ ಘಟಕಗಳ ದುರಸ್ತಿ ಮಾಡಿಸಿಕೊಳ್ಳಬೇಕು ಎಂದು ಹೇಳಿದರು.‌

ಕುಡಿಯುವ ನೀರು ಪೂರೈಕೆಗೆ ಯಾವುದೇ ಅನುದಾನದ ಕೊರತೆ ಇಲ್ಲ ಎಂದ ಅವರು ಅಭಿವೃದ್ಧಿ ಅಧಿಕಾರಿಗಳು ಎಂಜಿನಿಯರ್‌ಗಳು ಊರಲ್ಲಿ ಓಡಾಡಬೇಕು ಅಂದಾಗ ಮಾತ್ರ ಪರಿಸ್ಥಿತಿ ಅರ್ಥವಾಗುತ್ತದೆ. ಮೊದಲು ಗ್ರಾಮ ಪಂಚಾಯಿತಿ ಕೇಂದ್ರ ಸ್ಥಾನದಲ್ಲಿ ಇರುವುದನ್ನು ಕಲಿಯಿರಿ ಎಂದು ಅಭಿವೃದ್ಧಿ ಅಧಿಕಾರಿಗಳಿಗೆ ಸೂಚಿಸಿದರು. ತಹಶೀಲ್ದಾರ್ ಮಂಜುನಾಥ ಬೋಗಾವತಿ, ತಾಲ್ಲೂಕು ಪಂಚಾಯಿತಿ ಇಒ ಅಮರೇಶ ಯಾದವ ಇದ್ದರು. ತಾಲ್ಲೂಕಿನ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ಜೆಸ್ಕಾಂ ಸೇರಿದಂತೆ ವಿವಿಧ ಇಲಾಖೆ ಎಂಜಿನಿಯರ್ ಗಳು ಭಾಗವಹಿಸಿದ್ದರು.

ಮಸ್ಕಿ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಸೋಮವಾರ ನಡೆದ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಸಭೆಯಲ್ಲಿ ಶಾಸಕ ಆರ್. ಬಸನಗೌಡ ತುರ್ವಿಹಾಳ ಮಾತನಾಡಿದರು
ತಾಲ್ಲೂಕಿನ ಎಲ್ಲ ಗ್ರಾಮ ಪಂಚಾಯಿತಿಯಲ್ಲಿ ಫಾಗಿಂಗ್ ಮಾಡಿಸುವ ಮೂಲಕ ಸೊಳ್ಳೆಗಳು ಉತ್ಪತ್ತಿಯಾಗದಂತೆ ನೋಡಿಕೊಂಡು ರೋಗರುಜಿನಗಳು ಹರಡದಂತೆ ಕ್ರಮಕೈಗೊಳ್ಳಿ.
ಅಮರೇಶ ಯಾದವ್ ಇಒ ತಾಲ್ಲೂಕು ಪಂಚಾಯಿತಿ ಮಸ್ಕಿ

ಮದ್ಯದ ಅಂಗಡಿಗಳಿಗೆ ಕಡಿವಾಣ ಹಾಕಿ ಹಳ್ಳಿಗಳಲ್ಲಿ ಅನಧಿಕೃತವಾಗಿ ಮದ್ಯದ ಅಂಗಡಿಗಳು ತಲೆ ಎತ್ತುತ್ತಿರುವ ಬಗ್ಗೆ ಸಾಕಷ್ಟು ದೂರುಗಳು ಬಂದಿವೆ ಎಂದು ಶಾಸಕ ಆರ್. ಬಸನಗೌಡ ತುರ್ವಿಹಾಳ ಹೇಳಿದರು. ಮದ್ಯದ ಅಂಗಡಿಗಳಿಂದ ಊರುಗಳಲ್ಲಿ ಅಶಾಂತಿ ಉಂಟಾಗುತ್ತದೆ. ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಅನಧಿಕೃತ ಮದ್ಯದ ಅಂಗಡಿಗಳ ಪಟ್ಟಿ ಮಾಡಿ ಪೊಲೀಸ ಠಾಣೆಗೆ ದೂರು ನೀಡಬೇಕು ಅನಧಿಕೃತ ಮದ್ಯದ ಅಂಗಡಿಗಳನ್ನು ಮುಚ್ಚಿಸಲು ಕ ಶಾಸ್ವತ ಕಡಿವಾಣ ಹಾಕಲು ಕ್ರಮ ಕೈಗೊಳ್ಳಬೇಕು ಎಂದು ಶಾಸಕ ಆರ್. ಬಸನಗೌಡ ತುರ್ವಿಹಾಳ ಅಧಿಕಾರಿಗಳಿಗೆ ಸೂಚಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.