ರಾಯಚೂರು: ಕಲಬುರಗಿ ಪ್ರಾದೇಶಿಕ ಆಯುಕ್ತರ ಆದೇಶದ ಅನ್ವಯ ರಾಯಚೂರು ಜಿಲ್ಲೆಯ ಕೆರೆಗಳನ್ನು ತುಂಬಿಸಲು ತುಂಗಭದ್ರಾ ಜಲಾಶಯದಿಂದ ತುಂಗಭದ್ರಾ ಎಡದಂಡೆ ಮುಖ್ಯ ಕಾಲುವೆಗೆ ನೀರು ಹರಿಸಲು ನಿರ್ಧರಿಸಲಾಗಿದೆ.
ಕಾರ್ಯನಿರ್ವಾಹಕ ಎಂಜಿನಿಯರ್ ಹಾಗೂ ಕಾರ್ಯನಿರ್ವಾಹಕ ಎಂಜಿನಿಯರ್ ತಮ್ಮ ವ್ಯಾಪ್ತಿಯಲ್ಲಿನ ತೂಬುಗಳ ಗೇಟ್‍ಗಳನ್ನು ಬಂದ್ ಮಾಡಿ ನಿಗದಿತ ಪ್ರಮಾಣದ ನೀರನ್ನು ಹರಿಸಿ ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳ ಹಾಗೂ ಗ್ರಾಮಗಳ ವ್ಯಾಪ್ತಿಯಲ್ಲಿರುವ ಕೆರೆಗಳನ್ನು ತುಂಬಿಸಲು ಕ್ರಮಕೈಗೊಳ್ಳಬೇಕು ಎಂದು ಜಿಲ್ಲಾಡಳಿತಕ್ಕೆ ಸೂಚಿಸಲಾಗಿದೆ.
0 ದಿಂದ 104 ಮೈಲ್ ವರೆಗಿನ ತುಂಗಭದ್ರಾ ಎಡದಂಡೆ ಮುಖ್ಯ ಕಾಲುವೆಗೆ ಜುಲೈ 25 ರಿಂದ 28ರ ವರೆಗಿನ ಎಲ್ಲ ವಿತರಣಾ ಕಾಲುವೆಗಳನ್ನು ಮುಚ್ಚಬೇಕು ಎಂದು ಸೂಚನೆ ನೀಡಿದ್ದಾರೆ.
ಕಾಲುವೆಯಲ್ಲಿ ಮತ್ತು ಕಾಲುವೆಯ ಅಂಚಿನಲ್ಲಿ ಓಡಾಡುವುದು, ಕಾಲುವೆಯಿಂದ ನೀರನ್ನು ಬಳಸುವುದು, ಎತ್ತಿಕೊಳ್ಳುವುದನ್ನು ನಿಷೇಧಗೊಳಿಸಲಾಗಿದೆ ಎಂದು ಕರ್ನಾಟಕ ನೀರಾವರಿ ನಿಗಮದ ತುಂಗಭದ್ರಾ ಯೋಜನಾ ವೃತ್ತದ ಅಧೀಕ್ಷಕ ಎಂಜಿನಿಯರ್ ಎಲ್.ಬಸವರಾಜ್ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.