ADVERTISEMENT

ನೀರಿನ ಕಾಮಗಾರಿ ಕಳಪೆ: ಆರೋಪ

​ಪ್ರಜಾವಾಣಿ ವಾರ್ತೆ
Published 28 ಜುಲೈ 2021, 13:53 IST
Last Updated 28 ಜುಲೈ 2021, 13:53 IST
ರಾಯಚೂರಿನ ಜಿಲ್ಲಾ ಪಂಚಾಯಿತಿ ಕಚೇರಿ ಅಧಿಕಾರಿ ಶಶಿಕಾಂತ ಶಿವಪುರೆ ಅವರಿಗೆ ಮಾದಿಗ ಮೀಸಲಾತಿ ಹೋರಾಟ ಸಮಿತಿ ಮುಖಂಡರು ಮನವಿ ಸಲ್ಲಿಸಿದರು
ರಾಯಚೂರಿನ ಜಿಲ್ಲಾ ಪಂಚಾಯಿತಿ ಕಚೇರಿ ಅಧಿಕಾರಿ ಶಶಿಕಾಂತ ಶಿವಪುರೆ ಅವರಿಗೆ ಮಾದಿಗ ಮೀಸಲಾತಿ ಹೋರಾಟ ಸಮಿತಿ ಮುಖಂಡರು ಮನವಿ ಸಲ್ಲಿಸಿದರು   

ಕವಿತಾಳ: ಸಿರವಾರ ತಾಲ್ಲೂಕಿನ ಹಿರೇಬಾದರದಿನ್ನಿ ಗ್ರಾಮದಲ್ಲಿ ಜಲ ಜೀವನ್‍ ಮಿಷನ್‍ ಯೋಜನೆಯಡಿ ಕೈಗೊಂಡ ಕಾಮಗಾರಿ ಕಳಪೆಮಟ್ಟದಿಂದ ಕೂಡಿದ್ದು, ಸಂಬಂಧಪಟ್ಟ ಗುತ್ತಿಗೆದಾರರು ಮತ್ತು ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಮಾದಿಗ ಮೀಸಲಾತಿ ಹೋರಾಟ ಸಮಿತಿ ಮುಖಂಡರು ಆಗ್ರಹಿಸಿದ್ದಾರೆ.

ಈ ಕುರಿತು ಜಿಲ್ಲಾ ಪಂಚಾಯಿತಿ ಸಿಇಒ ಅವರಿಗೆ ಬರೆದ ಮನವಿ ಪತ್ರವನ್ನು ಈಚೆಗೆ ರಾಯಚೂರಿನ ಜಿಲ್ಲಾ ಪಂಚಾಯಿತಿ ಕಾರ್ಯದರ್ಶಿ ಶಶಿಕಾಂತ ಶಿವಪುರೆ ಅವರಿಗೆ ಸಲ್ಲಿಸಿದ್ದಾರೆ.

ಅಂದಾಜು ₹ 43 ಲಕ್ಷ ಮೊತ್ತದ ಕಾಮಗಾರಿ ಕೈಗೊಂಡಿದ್ದು, ವರದಿಯಂತೆ ಕೆಲಸ ನಡೆಯುತ್ತಿಲ್ಲ. ಕುಡಿಯುವ ನೀರು ಸರಬರಾಜು ಮಾಡುವ ಹಳೇ ಪೈಪ್‌ಗಳಿಗೆ ಸಂಪರ್ಕ ಕಲ್ಪಿಸುತ್ತಿದ್ದು ಸರ್ಕಾರದ ನಿಯಮಗಳನ್ನು ಪಾಲಿಸುತ್ತಿಲ್ಲ. ಸಂಬಂಧಪಟ್ಟ ಎಂಜಿನಿಯರ್ ಮತ್ತು ಗುತ್ತಿಗೆದಾರರು ಸ್ಥಳಕ್ಕೆ ಬಾರದೆ ಉಪ ಗುತ್ತಿಗೆದಾರರು ಕಾಮಗಾರಿ ನಿರ್ವಹಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ADVERTISEMENT

ಸಮಿತಿಯ ಹೋಬಳಿ ಘಟಕದ ಅಧ್ಯಕ್ಷ ಅಮರೇಶ ಹಿರೇಬಾದರದಿನ್ನಿ, ಎಸ್‍.ಶಿವರಾಜ ಮತ್ತು ಬಿ.ಯಮನಪ್ಪ ಮತ್ತಿತರರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.