ADVERTISEMENT

ಸಮಾಜದ ಅಭಿವೃದ್ಧಿಗೆ ಶ್ರಮಿಸಬೇಕು: ಬಿ.ಎಸ್. ಅರುಣಾದೇವಿ

ಸದಸ್ಯತ್ವ ನೋಂದಣಿ ಅಭಿಯಾನ

​ಪ್ರಜಾವಾಣಿ ವಾರ್ತೆ
Published 1 ಮಾರ್ಚ್ 2022, 15:55 IST
Last Updated 1 ಮಾರ್ಚ್ 2022, 15:55 IST
ರಾಯಚೂರಿನ ಬಸವ ಕೇಂದ್ರದಲ್ಲಿ ಅಖಿಲ ಭಾರತ ವೀರಶೈವ ಮಹಾಸಭಾ ಜಿಲ್ಲಾ ಘಟಕ, ಯುವ ಘಟಕ, ಮಹಿಳಾ ಘಟಕದಿಂದ ಮಂಗಳವಾರ ಆಯೋಜಿಸಿದ್ದ ಸದಸ್ಯತ್ವ ನೋಂದಣಿ ಅಭಿಯಾನ ಹಾಗೂ ಜಿಲ್ಲಾ ಮಹಿಳಾ ಘಟಕ ರಚನೆ ಮತ್ತು ವಿಶೇಷ ಸಭೆಯಲ್ಲಿ ಶಾಸಕ ಡಾ.ಶಿವರಾಜ ಪಾಟೀಲ ಮಾತನಾಡಿದರು.
ರಾಯಚೂರಿನ ಬಸವ ಕೇಂದ್ರದಲ್ಲಿ ಅಖಿಲ ಭಾರತ ವೀರಶೈವ ಮಹಾಸಭಾ ಜಿಲ್ಲಾ ಘಟಕ, ಯುವ ಘಟಕ, ಮಹಿಳಾ ಘಟಕದಿಂದ ಮಂಗಳವಾರ ಆಯೋಜಿಸಿದ್ದ ಸದಸ್ಯತ್ವ ನೋಂದಣಿ ಅಭಿಯಾನ ಹಾಗೂ ಜಿಲ್ಲಾ ಮಹಿಳಾ ಘಟಕ ರಚನೆ ಮತ್ತು ವಿಶೇಷ ಸಭೆಯಲ್ಲಿ ಶಾಸಕ ಡಾ.ಶಿವರಾಜ ಪಾಟೀಲ ಮಾತನಾಡಿದರು.   

ರಾಯಚೂರು: ಸಮಾಜದ ಅಭಿವೃದ್ಧಿಗೆ ಎಲ್ಲರೂ ಜವಾಬ್ದಾರಿಯಿಂದ ಕೆಲಸ ಮಾಡಬೇಕು. ಸಂಘಟನಾತ್ಮಕವಾಗಿ ದುಡಿಯಬೇಕು ಎಂದು ಅಖಿಲ ಭಾರತ ವೀರಶೈವ ಮಹಾಸಭಾ ರಾಜ್ಯಾದ್ಯಕ್ಷೆ ಬಿ.ಎಸ್. ಅರುಣಾದೇವಿ ಹೇಳಿದರು.

ನಗರದ ಬಸವ ಕೇಂದ್ರದಲ್ಲಿ ಅಖಿಲ ಭಾರತ ವೀರಶೈವ ಮಹಾಸಭಾ ಜಿಲ್ಲಾ ಘಟಕ, ಯುವ ಘಟಕ, ಮಹಿಳಾ ಘಟಕದಿಂದ ಮಂಗಳವಾರ ಆಯೋಜಿಸಿದ್ದ ಸದಸ್ಯತ್ವ ನೋಂದಣಿ ಅಭಿಯಾನ ಹಾಗೂ ಜಿಲ್ಲಾ ಮಹಿಳಾ ಘಟಕ ರಚನೆ ಮತ್ತು ವಿಶೇಷ ಸಭೆ ಉದ್ಘಾಟಿಸಿ ಮಾತನಾಡಿದರು.

ರಾಜ್ಯದಲ್ಲಿ ವೀರಶೈವ ಸಮಾಜ ರಾಜ್ಯ ಮತ್ತು ಜಿಲ್ಲಾ ಘಟಕದಲ್ಲಿ ಸದಸ್ಯತ್ವ ಅಭಿಯಾನವನ್ನು ಹಮ್ಮಿಕೊಂಡಿದ್ದು, ಹೆಚ್ಚೆಚ್ಚು ಸದಸ್ಯರು ನೋಂದಣಿ ಮಾಡಲು ತೀರ್ಮಾನಿಸಲಾಗಿದೆ. ಸಮಾಜದ ಅಭಿವೃದ್ಧಿ ಮತ್ತು ಬೆಳೆವಣಿಗೆ ಘಟಕ ರಚನೆ ಮಾಡಲಾಗಿದೆ. ಸದಸ್ಯರು ಸಕ್ರಿಯವಾಗಿ ತೊಡಗಿಸಿಕೊಂಡು ಪ್ರೋತ್ಸಾಹ ನೀಡಬೇಕು. ಸಂಘದಿಂದ ಸಮಾಜಮುಖಿ ಚಟುವಟಿಕೆಗಳನ್ನು ಮಾಡಲು ಉದ್ದೇಶಿಸಲಾಗಿದೆ ಎಂದು ತಿಳಿಸಿದರು.

ADVERTISEMENT

ರಾಜ್ಯದಲ್ಲಿ ವೀರಶೈವ ಸಮಾಜದ ಮಹಿಳೆಯರ ಸಂಘಟನೆಗೆ ರೂಪುರೇಷೆಗಳು ಮಾಡಿಕೊಂಡಿದ್ದು, ಮಹಿಳೆಯರು ಮುಂಚೂಣಿಯಲ್ಲಿರಲು ಸಕ್ರಿಯರನ್ನು ಗುರುತಿಸಿ ಮಹಿಳಾ ಘಟಕ ರಚನೆ ಮಾಡಿ ಜವಾಬ್ದಾರಿ ನೀಡಲಾಗಿದೆ ಎಂದು ಹೇಳಿದರು.

ರಾಜ್ಯದಲ್ಲಿ ಪ್ರವಾಸ ಕೈಗೊಂಡು ಮಹಿಳಾ ಘಟಕ ರಚನೆ ಮಾಡುತ್ತಿದ್ದು, ಸಮಾಜದ ಅಭಿವೃದ್ಧಿ ಮತ್ತು ಸಂಘಟನೆ ಹೆಚ್ಚಿನ ಚಟುವಟಿಕೆಗಳನ್ನು ಮಾಡಲಾಗುತ್ತಿದೆ. ಪ್ರತಿ ಜಿಲ್ಲೆಯಲ್ಲಿ ಮಹಿಳಾ ಘಟಕ ರಚನೆ ಮಾಡಿ ವಿವಿಧ ಚಟುವಟಿಕೆಗಳನ್ನು ನಡೆಸಿ ಅವರಿಗೆ ಜವಾಬ್ದಾರಿ ನೀಡಲಾಗುತ್ತಿದೆ ಎಂದರು.

ಕಿಲ್ಲೇ ಬೃಹನ್ಮಠದ ಶಾಂತಮಲ್ಲ ಶಿವಾಚಾರ್ಯ ಮಹಾಸ್ವಾಮಿ ಮಾತನಾಡಿ, ವೀರಶೈವ ಸಮಾಜದ ಸದಸ್ಯತ್ವ ಹೆಚ್ಚಳಕ್ಕೆ ಸಂಘಟನೆ ರಚನೆ ಮಾಡಿದರೆ ಸಾಲದು ಪ್ರತಿಯೊಬ್ಬರಿಗೂ ಜವಾಬ್ದಾರಿ ವಹಿಸಿಕೊಂಡಾಗ ಸಾರ್ಥಕವಾಗುತ್ತದೆ. ಜಿಲ್ಲೆಯಲ್ಲಿ ವೀರಶೈವ ಸಮಾಜದ ಸಂಖ್ಯೆ ₹3 ಲಕ್ಷಕ್ಕೂ ಅಧಿಕಯಿದ್ದರೂ ಕೇವಲ ₹4 ಸಾವಿರ ಮಾತ್ರ ಸದಸ್ಯತ್ವ ನೋಂದಣಿಯಾಗಿದೆ. ಸಮಾಜದ ಪ್ರತಿಯೊಬ್ಬರೂ ಸದಸ್ಯತ್ವ ಪಡೆದುಕೊಳ್ಳಬೇಕು ಎಂದು ಹೇಳಿದರು.

ಶಾಸಕ ಡಾ.ಶಿವರಾಜ ಪಾಟೀಲ, ಅಖಿಲ ಭಾರತ ವೀರಶೈವ ಮಹಾಸಭಾದ ಜಿಲ್ಲಾಧ್ಯಕ್ಷ ಚಂದ್ರಶೇಖರ ಪಾಟೀಲ‌ ಮಿರ್ಜಾಪೂರ, ಶರಣ ಬಸವ ಮತ್ತಿತರರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.