ರಾಯಚೂರು: ‘ಮಗುವಿನ ಸಮಗ್ರ ಬೆಳವಣಿಗೆ ಹಾಗು ಸದೃಢ ಆರೋಗ್ಯಕ್ಕೆ ಹೆರಿಗೆಯಾದ ಅರ್ಧ ಗಂಟೆಯ ನಂತರ ಹಾಗೂ ಆರು ತಿಂಗಳ ವರೆಗೆ ತಾಯಿಯ ಎದೆ ಹಾಲು ಕುಡಿಸುವುದು ಅಗತ್ಯ’ ಎಂದು ಡಿಎಚ್‌ಒ ಡಾ.ಸುರೇಂದ್ರ ಬಾಬು ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಸಂತಾನೋತ್ಪತ್ತಿ ಮತ್ತು ಮಕ್ಕಳ ಆರೋಗ್ಯ ಕಾರ್ಯಕ್ರಮ ಹಾಗೂ ತಾಲ್ಲೂಕು ಆರೋಗ್ಯ ಅಧಿಕಾರಿ ಕಚೇರಿ ವತಿಯಿಂದ ನಗರದ ತಾಯಿ ಮಕ್ಕಳ ಆಸ್ಪತ್ರೆಯಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ವಿಶ್ವ ಸ್ತನ್ಯಪಾನ ಸಪ್ತಾಹ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಎಂ.ಎನ್, ಜಿಲ್ಲಾ ಸಂತಾನೋತ್ಪತ್ತಿ ಮತ್ತು ಆರೋಗ್ಯ ಅಧಿಕಾರಿ ಡಾ.ನಂದಿತಾ ಮಾತನಾಡಿ, ‘ತಾಯಿ ಎದೆ ಹಾಲು ನೀಡುವುದರಲ್ಲಿ ಹೂಡಿಕೆ ಮಾಡಿದರೆ ಮಕ್ಕಳ ಆರೋಗ್ಯಕರ ಭವಿಷ್ಯಕ್ಕಾಗಿ ಹೂಡಿಕೆ ಮಾಡಿದಂತೆ’ ಎಂಬುದು ಈ ವರ್ಷದ ಘೋಷಣೆಯಾಗಿದೆ’ ಎಂದರು.
ಈ ಸಂದರ್ಭದಲ್ಲಿ ಜಿಲ್ಲಾ ಕ್ಷಯರೋಗ ನಿರ್ಮೂಲನಾಧಿಕಾರಿ ಡಾ.ಮಹ್ಮದ್ ಶಾಕೀರ್, ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಪ್ರಜ್ವಲ ಕುಮಾರ, ರೆಡಿಯಾಲಾಜಿಸ್ಟ್ ಡಾ.ಇರ್ಮಾನ ಪರವೇಜ್, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಸರೋಜಾ ಕೆ, ಡಾ.ಭುವನೇಶ್ವರಿ, ಡಾ.ಬಸ್ಸಮ್ಮ ಮತ್ತಿತರರು ಉಪಸ್ಥಿತರಿದ್ದರು.
ನಗರದ ತಾಯಿ ಮಕ್ಕಳ ಆಸ್ಪತ್ರೆಯಲ್ಲಿ ಮಕ್ಕಳ ತಜ್ಞ ವೈದ್ಯರು ಕಾರ್ಯನಿರ್ವಹಿಸುತ್ತಿದ್ದು ಸಾರ್ವಜನಿಕರು ಪ್ರಯೋಜನ ಪಡೆಯಬೇಕುಡಾ.ಸುರೇಂದ್ರ ಬಾಬು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.