ADVERTISEMENT

ರಾಯಚೂರು | ‘ಮಾನಸಿಕ ಆರೋಗ್ಯ ಕಾಪಾಡಿಕೊಳ್ಳಿ’

​ಪ್ರಜಾವಾಣಿ ವಾರ್ತೆ
Published 14 ಅಕ್ಟೋಬರ್ 2023, 16:09 IST
Last Updated 14 ಅಕ್ಟೋಬರ್ 2023, 16:09 IST
ರಾಯಚೂರು ಜಿಲ್ಲಾ ಕಾರಾಗೃಹದಲ್ಲಿ ಆಯೋಜಿಸಿದ್ದ ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಮನೋರೋಗ ತಜ್ಞ ಡಾ. ಮನೋಹರ ಮಾತನಾಡಿದರು
ರಾಯಚೂರು ಜಿಲ್ಲಾ ಕಾರಾಗೃಹದಲ್ಲಿ ಆಯೋಜಿಸಿದ್ದ ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಮನೋರೋಗ ತಜ್ಞ ಡಾ. ಮನೋಹರ ಮಾತನಾಡಿದರು   

ರಾಯಚೂರು: ‘ಪ್ರತಿಯೊಬ್ಬರೂ ಸಕಾರಾತ್ಮಕ ಚಿಂತನೆಗಳ ಮೂಲಕ ಮಾನಸಿಕ ಆರೋಗ್ಯ ಕಾಪಾಡಿಕೊಳ್ಳಬೇಕು’ ಎಂದು ಬ್ರಹ್ಮಕುಮಾರಿ ಈಶ್ವರೀಯ ವಿದ್ಯಾಲಯದ ಸಂಚಾಲಕಿ ಅಕ್ಕ ಸ್ಮಿತಾ ಹೇಳಿದರು.

ಇಲ್ಲಿಯ ಜಿಲ್ಲಾ ಕಾರಾಗೃಹದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಮಾನಸಿಕ ಆರೋಗ್ಯ ವಿಭಾಗದ ವತಿಯಿಂದ ಆಯೋಜಿಸಿದ್ದ ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

‘ಸದೃಢ ಆರೋಗ್ಯಕ್ಕೆ ಉತ್ತಮ ಆಹಾರ, ವಿಹಾರ ಹಾಗೂ ವ್ಯಾಯಾಮ ಹೇಗೆ ಅಗತ್ಯವೋ ಹಾಗೆಯೇ ಮಾನಸಿಕ ಆರೋಗ್ಯಕ್ಕೆ ಉತ್ತಮ ಆಲೋಚನೆ, ಸಕಾರಾತ್ಮಕ ಚಿಂತನೆಗಳ ಅಗತ್ಯ’ ಎಂದು ಅಭಿಪ್ರಾಯಪಟ್ಟರು.

ADVERTISEMENT

ರಾಯಚೂರಿನ ಮನೋರೋಗ ತಜ್ಞ ಡಾ. ಮನೋಹರ, ಆಕಾಶವಾಣಿಯ ಪ್ರಸಾರ ನಿರ್ವಾಹಕ ವೆಂಕಟೇಶ ಬೇವಿನಬೆಂಚಿ ಮಾತನಾಡಿದರು.

ಜಿಲ್ಲಾ ಕಾರಾಗೃಹ ಅಧೀಕ್ಷಕ ಬಿ.ಆರ್  ಅಂದಾನಿ ಅಧ್ಯಕ್ಷತೆ ವಹಿಸಿದ್ದರು. ಕಾರಾಗೃಹದ ಅಧಿಕಾರಿ ಸಿಬ್ಬಂದಿ ವರ್, ಜೈಲು ವಾಸಿಗಳು ಇದ್ದರು. ಅನ್ನಪೂರ್ಣ ಪ್ರಾರ್ಥಿಸಿದರು. ಭಾರತಿ ಸ್ವಾಗತಿಸಿದರು. ಕಲ್ಪನಾ ನಾಯಕ ವಂದಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.