
ಪ್ರಜಾವಾಣಿ ವಾರ್ತೆ
ರಾಯಚೂರು: ಯರಮರಸ್ ಉಷ್ಣ ವಿದ್ಯುತ್ ಸ್ಥಾವರದ (ವೈಟಿಪಿಎಸ್) ಸಿಎಚ್‌ಪಿ–3 ವಿಭಾಗದ ಕಲ್ಲಿದ್ದಲು ಬೆಲ್ಟ್‌ನಲ್ಲಿ ಮಂಗಳವಾರ ಬೆಂಕಿ ಅವಘಡ ಸಂಭವಿಸಿ ಕೋಟ್ಯಂತರ ಮೌಲ್ಯದ ಪರಿಕರ ಸುಟ್ಟಿವೆ.
ವಿದ್ಯುತ್ ಘಟಕಗಳಿಗೆ ಕಲ್ಲಿದ್ದಲು ಪೂರೈಸುವ 600 ಮೀಟರ್ ಬೆಲ್ಟ್ ಇತರೆ ಸಾಮಗ್ರಿಗಳು ಸುಟ್ಟಿವೆ. ಆರ್‌ಟಿಪಿಎಸ್, ವೈಟಿಪಿಎಸ್, ರಾಯಚೂರು ಅಗ್ನಿಶಾಮಕ ಸಿಬ್ಬಂದಿ ಬಂದು ಬೆಂಕಿ ನಂದಿಸಿದ್ದಾರೆ.
ಹಿರಿಯ ಎಂಜಿನಿಯರ್, ಸಿಬ್ಬಂದಿ ಕೊರತೆಯಿಂದ ಸರಿಯಾಗಿ ನಿಗಾ ಇಡಲಾಗಿಲ್ಲ. ಅವಘಡಕ್ಕೆ ಕಾರಣ ತಿಳಿದುಬಂದಿಲ್ಲ. ಸಿ.ಸಿ.ಟಿ.ವಿ ಕ್ಯಾಮೆರಾ ದೃಶ್ಯ ಪರಿಶೀಲಿಸಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.