ಮಸ್ಕಿ: ತಾಲ್ಲೂಕಿನ ಅಂಕುಶದೊಡ್ಡಿ ಗ್ರಾಮದಲ್ಲಿ ಮಂಗಳವಾರ ರಾತ್ರಿ ಸಿಡಿಲು ಬಡಿದು ರಾಮಣ್ಣ ನಾಯಕ (25) ಎಂಬುವರು ಮೃತಪಟ್ಟಿದ್ದಾರೆ.
ರಾಮಣ್ಣ ಅವರು ಗ್ರಾಮದ ಬೆಟ್ಟದ ಕುರಿ ಹಟ್ಟಿಯಲ್ಲಿದ್ದಾಗ ಸಿಡಿಲು ಬಡಿದಿದೆ. ಲಿಂಗಸುಗೂರು ಸರ್ಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗುವ ವೇಳೆ ಅವರು ಮೃತಪಟ್ಟಿದ್ದಾರೆ. ಮೂರು ಕುರಿಗಳು ಸಹ ಸಿಡಿಲಿಗೆ ಮೃತಪಟ್ಟಿವೆ ಎಂದು ತಹಶೀಲ್ದಾರ್ ಮಲ್ಲಪ್ಪ ಯರಗೋಳ ತಿಳಿಸಿದ್ದಾರೆ.
ಗ್ರಾಮಕ್ಕೆ ಪಿಎಸ್ಐ ಮುದ್ದುರಂಗಯ್ಯ, ಕಂದಾಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದ್ದಾರೆ. ಮಸ್ಕಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.