ADVERTISEMENT

ಕೃಷಿ ತಾಂತ್ರಿಕ ಮಹಾವಿದ್ಯಾಲಯ: ಯುವ ದಿನಾಚರಣೆ

​ಪ್ರಜಾವಾಣಿ ವಾರ್ತೆ
Published 15 ಜನವರಿ 2022, 12:01 IST
Last Updated 15 ಜನವರಿ 2022, 12:01 IST
ರಾಯಚೂರು ಕೃಷಿ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಈಚೆಗೆ ಸ್ವಾಮಿ ವಿವೇಕಾನಂದರ ಜನ್ಮದಿನದಂದು ರಾಷ್ಟ್ರೀಯ ಯುವ ದಿನ ಆಚರಣೆ ಜೊತೆಗೆ ರಕ್ತದಾನ ಶಿಬಿರ ನಡೆಸಲಾಯಿತು.
ರಾಯಚೂರು ಕೃಷಿ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಈಚೆಗೆ ಸ್ವಾಮಿ ವಿವೇಕಾನಂದರ ಜನ್ಮದಿನದಂದು ರಾಷ್ಟ್ರೀಯ ಯುವ ದಿನ ಆಚರಣೆ ಜೊತೆಗೆ ರಕ್ತದಾನ ಶಿಬಿರ ನಡೆಸಲಾಯಿತು.   

ರಾಯಚೂರು: ನಗರದ ಕೃಷಿ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಈಚೆಗೆ ಸ್ವಾಮಿ ವಿವೇಕಾನಂದ ಜಯಂತಿ, ರಾಷ್ಟ್ರೀಯ ಯುವ ದಿನ ಆಚರಣೆ ಜೊತೆಗೆ ರಕ್ತದಾನ ಶಿಬಿರ ನಡೆಸಲಾಯಿತು.

ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ಕುಲಸಚಿವ ಡಾ. ಎಂ. ವೀರನಗೌಡ ಅವರು ದೀಪ ಬೆಳಗಿಸಿ ಸ್ವಾಮಿ ವಿವೇಕಾನಂದರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಕಾರ್ಯಕ್ರಮ ಉದ್ಘಾಟಿಸಿ, ಮಾತನಾಡಿದರು.

ರ‍್ರಿಮ್ಸ್ ರಾಯಚೂರಿನ ರಕ್ತನಿಧಿ ಕೇಂದ್ರದ ವೈಧ್ಯಾಧಿಕಾರಿ ಡಾ.ಗುರುರಾಜ ಕುಲಕರ್ಣಿ ಮಾತನಾಡಿ, ದೇಶದಲ್ಲಿ ರಕ್ತದ ಅಭಾವತೆ ಹಾಗೂ ಅವಶ್ಯಕತೆ ಹೇರಳವಾಗಿರುವುದರಿಂದ ಯುವಕ-ಯುವತಿಯರು ರಕ್ತ ನೀಡಿ ಸಾಯುವ ಜೀವಗಳನ್ನು ಉಳಿಸಲು ಮುಂದೆ ಬರಬೇಕೆಂದು ತಿಳಿಸಿದರು.

ADVERTISEMENT

ರಾಯಚೂರು ಸರ್ಕಾರಿ ಪ್ರಥಮ ದರ್ಜೆ ಮಹಾವಿದ್ಯಾಲಯದ ಸಹ-ಪ್ರಾಧ್ಯಾಪಕ ಡಾ.ಪ್ರಾಣೇಶ್‌ಕುಲಕರ್ಣಿ ಅವರು ವಿಶೇಷ ಉಪನ್ಯಾಸ ನೀಡಿದರು. ಜಿಲ್ಲಾಏಡ್ಸ್ ನಿಯಂತ್ರಣಾಧಿಕಾರಿ ಡಾ.ಸುರೇಂದ್ರಬಾಬು, ಹಾಗೂ ಕೃಷಿ ಮಹಾವಿದ್ಯಾಲಯದ ಡೀನ್ ರಾದ ಡಾ.ಸತ್ಯನಾರಾಯಣರಾವ್ ಇದ್ದರು.

ಕೃಷಿ ತಾಂತ್ರಿಕ ಮಹಾವಿದ್ಯಾಲಯ ಡೀನ್‌ ಡಾ. ಎಂ.ನೇಮಿಚಂದ್ರಪ್ಪ ಅಧ್ಯಕ್ಷತೆಯನ್ನು ವಹಿಸಿದ್ದರು. ಬಿ.ಟೆಕ್ ಕೃಷಿ ತಾಂತ್ರಿಕ ವಿದ್ಯಾರ್ಥಿ ಮಹೇಶ ನಿರೂಪಿಸಿದರು. ಮೋನಿಷಾ ಸ್ವಾಗತಿಸಿದರು ಮತ್ತು ಕಿರಣಕುಮಾರ ವಂದಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.