ADVERTISEMENT

ಅರ್ಧಕ್ಕೆ ನಿಂತ ಇಂದಿರಾ ಕ್ಯಾಂಟಿನ್‌ ಕಟ್ಟಡ

​ಪ್ರಜಾವಾಣಿ ವಾರ್ತೆ
Published 4 ಜೂನ್ 2018, 9:53 IST
Last Updated 4 ಜೂನ್ 2018, 9:53 IST
ಅರ್ಧಕ್ಕೆ ನಿಂತಿರುವ ಇಂದಿರಾ ಕ್ಯಾಂಟೀನ್‌ ಕಾಮಗಾರಿ.
ಅರ್ಧಕ್ಕೆ ನಿಂತಿರುವ ಇಂದಿರಾ ಕ್ಯಾಂಟೀನ್‌ ಕಾಮಗಾರಿ.   

ಮಾಗಡಿ: ಪಟ್ಟಣದ ತಹಶೀಲ್ದಾರ್‌ ಕಚೇರಿಯ ಹಿಂಭಾಗದಲ್ಲಿ ಶಾಸಕ ಎಚ್‌.ಸಿ.ಬಾಲಕೃಷ್ಣ ಅಧಿಕಾರದ ಅವಧಿಯಲ್ಲಿ ಬಡಜನರ ಬಳಕೆಗಾಗಿ ಇಂದಿರಾ ಕ್ಯಾಂಟಿನ್‌ ನಿರ್ಮಿಸಲು ಕಾಮಗಾರಿ ಆರಂಭಿಸಿ ಅರ್ಧಕ್ಕೆ ನಿಲ್ಲಿಸಿರುವುದು ಸರಿಯಲ್ಲ ಎಂದು ತಿರುಮಲೆ ಕನ್ನಡ ಕೂಟದ ಸಂಚಾಲಕ ತಿರುಮಲೆ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.

ಬಡವರಿಗೆ ಕಡಿಮೆ ದರದಲ್ಲಿ ತಿಂಡಿ, ಕಾಪಿ, ಅನ್ನ ನೀಡುವ ಈ ಕ್ಯಾಂಟಿನ್‌ ಕಾಮಗಾರಿ ಶೀಘ್ರವಾಗಿ ಪೂರ್ಣಗೊಳಿಸಬೇಕು. ಬಡವರ ಪರವಾಗಿ ಕೆಲಸ ಮಾಡುವ ಸರ್ಕಾರದ ಮಹತ್ವದ ಯೋಜನೆಗಳು ಅರ್ಧಕ್ಕೆ ನಿಲ್ಲಬಾರದು. ಕ್ಯಾಂಟಿನ್‌ ಆರಂಭಿಸಿ ಹಸಿದ ಹೊಟ್ಟೆಗಳಿಗೆ ಅನ್ನನೀಡುವಂತೆ ಅವರು ಆಗ್ರಹಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT