ADVERTISEMENT

ಎಲೆ ಅಡಿಕೆ‌ ಉಗಿದು ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 19 ಮೇ 2018, 8:49 IST
Last Updated 19 ಮೇ 2018, 8:49 IST
ಚನ್ನಪಟ್ಟಣದಲ್ಲಿ ಪ್ರಗತಿಪರ ಸಂಘಟನೆಗಳ ಒಕ್ಕೂಟದ ಪದಾಧಿಕಾರಿಗಳು ಎಲೆ ಅಡಿಕೆ ಅಗಿದು ಉಗಿಯುವ ಪ್ರತಿಭಟನೆ ನಡೆಸಿದರು
ಚನ್ನಪಟ್ಟಣದಲ್ಲಿ ಪ್ರಗತಿಪರ ಸಂಘಟನೆಗಳ ಒಕ್ಕೂಟದ ಪದಾಧಿಕಾರಿಗಳು ಎಲೆ ಅಡಿಕೆ ಅಗಿದು ಉಗಿಯುವ ಪ್ರತಿಭಟನೆ ನಡೆಸಿದರು   

ಚನ್ನಪಟ್ಟಣ: ಬಹುಮತ ಇಲ್ಲದಿದ್ದರೂ ಸರ್ಕಾರ ರಚಿಸಲು ಷಡ್ಯಂತ್ರ ರೂಪಿಸಿದ್ದಾರೆ ಎಂದು ಆರೋಪಿಸಿ ಕೇಂದ್ರ ಬಿಜೆಪಿ ನಾಯಕರ ಭಾವಚಿತ್ರಗಳಿಗೆ ಎಲೆ ಅಡಿಕೆ ಉಗಿಯುವ ಪ್ರತಿಭಟನೆ ಪಟ್ಟಣದ ಅಂಬೇಡ್ಕರ್ ಪ್ರತಿಮೆ ಬಳಿ ಪ್ರಗತಿಪರ ಸಂಘಟನೆಗಳ ಒಕ್ಕೂಟದ ಪದಾಧಿಕಾರಿಗಳು ಶುಕ್ರವಾರ ಹಮ್ಮಿಕೊಂಡಿದ್ದರು. ರಾಜ್ಯಪಾಲ ವಜುಬಾಯಿ ವಾಲಾ, ಪ್ರಧಾನಿ ನರೇಂದ್ರ ಮೋದಿ, ಅಮಿತ್ ಶಾ ಅವರ ಭಾವಚಿತ್ರಗಳನ್ನು ಇಡಲಾಗಿತ್ತು. ಪ್ರತಿಭಟನಾಕಾರರು ಸರ್ಕಾರ ಹಾಗೂ ರಾಜ್ಯಪಾಲರ ಕ್ರಮ ಖಂಡಿಸಿದರು.

ಸಂಘಟನೆಯ ಸಂಚಾಲಕ ಪಿ.ಜೆ. ಗೋವಿಂದರಾಜು ಮಾತನಾಡಿ, ಜವಾಬ್ದಾರಿಯುತ ಹುದ್ದೆಯಲ್ಲಿರುವ ರಾಜ್ಯಪಾಲರು ಕೇಂದ್ರದ ಕೈಗೊಂಬೆಯಾಗಿ ವರ್ತಿಸುತ್ತಾ ಪ್ರಜಾಪ್ರಭುತ್ವದ ಕಗ್ಗೊಲೆ ಮಾಡಿದ್ದಾರೆ. ಹಾಗೆಯೆ ಇದಕ್ಕೆ ಕೇಂದ್ರ ಸರ್ಕಾರ ಕರ್ನಾಟಕದ ರಾಜಕಾರಣವನ್ನು ಬುಡಮೇಲು ಮಾಡಲು ಹೊರಟಿದ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT