ADVERTISEMENT

ಕಲಾ ವಿಷಯಗಳ ಬಗ್ಗೆ ಕಡೆಗಣನೆ ಸಲ್ಲ

​ಪ್ರಜಾವಾಣಿ ವಾರ್ತೆ
Published 6 ಅಕ್ಟೋಬರ್ 2011, 19:30 IST
Last Updated 6 ಅಕ್ಟೋಬರ್ 2011, 19:30 IST

ಕನಕಪುರ: ವಿದ್ಯಾರ್ಥಿಗಳು ತಾಂತ್ರಿಕ ಮತ್ತು ವೈದ್ಯಕೀಯ ವಿಭಾಗಗಳಿಗೆ ಮಾತ್ರ ಸೀಮಿತವಾಗದೆ ಇತರೆ ಕ್ಷೇತ್ರಗಳಿಗೂ ಆಸಕ್ತಿ ತೋರಿದರೆ ನಮ್ಮ ಮುಂದಿರುವ ಸವಾಲುಗಳನ್ನು ಸಮರ್ಥವಾಗಿ ಎದುರಿಸಲು ಸಾಧ್ಯವೆಂದು ಚಲನಚಿತ್ರ ನಿರ್ಮಾಪಕ ನಿರ್ದೇಶಕರಾದ ಡಾ.ರಾಧಾಕೃಷ್ಣರಾಜು ಹೇಳಿದರು.

ಪಟ್ಟಣದ ಲಕ್ಷ್ಮಿ ವೆಂಕಟೇಶ್ವರ ಕಲ್ಯಾಣ ಮಂಟಪದಲ್ಲಿ ಜರುಗಿದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಾಂಸ್ಕೃತಿಕ ಕ್ರೀಡೆ ಮತ್ತು ಎನ್.ಎಸ್.ಎಸ್.ನ ಉದ್ಘಾಟನೆ ಸಮಾರಂಭದಲ್ಲಿ ಪಾಲ್ಗೊಂಡು ಅವರು ಮಾತನಾಡಿ, ಪೋಷಕರು ವೈದ್ಯಕೀಯ ಮತ್ತು ತಾಂತ್ರಿಕ ಶಿಕ್ಷಣಗಳೆರಡು ಮಾತ್ರ ಪ್ರತಿಷ್ಠೆಯೆಂದು ವಾಣಿಜ್ಯ, ಕಲಾ, ಪತ್ರಿಕೋದ್ಯಮ, ಪ್ರವಾಸೋದ್ಯಮ ಕೋರ್ಸುಗಳನ್ನು ಕಡೆಗಣಿಸುತ್ತಿದ್ದಾರೆ ಎಂದರು.

ತಾಲ್ಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಎಂ.ಪುರುಷೋತ್ತಮ್ ಮಾತನಾಡಿ, ಸಾವಿರಾರು ಬಡ ವಿದ್ಯಾರ್ಥಿಗಳಿಗೆ ಉನ್ನತ ವ್ಯಾಸಂಗ ಮಾಡಲು ಅವಕಾಶ ಕಲ್ಪಿಸಿರುವಂತ ಸರ್ಕಾರಿ ಕಾಲೇಜಿಗೆ ಸ್ವಂತ ಕಟ್ಟಡವಿಲ್ಲದೆ ಮಕ್ಕಳಿಗೆ ತೊಂದರೆಯಾಗುತ್ತಿತ್ತು. ಶಾಸಕ ಡಿ.ಕೆ.ಶಿವಕುಮಾರ್ ಕಾಲೇಜಿಗೆ ಬೂದಿಗುಪ್ಪೆ ಗ್ರಾಮದಲ್ಲಿನ ಸರ್ಕಾರಿಯ 3 ಎಕರೆ 23 ಗುಂಟೆ ಜಾಗವನ್ನು ಮಂಜೂರು ಮಾಡಿಸಿದ್ದಾರೆ ಎಂದರು.

ಇತ್ತೀಚೆಗೆ ಪ್ರಾರಂಭವಾದ ಸರ್ಕಾರಿ ಪದವಿ ಕಾಲೇಜನಲ್ಲಿ ಅಗತ್ಯ ಮೂಲಸೌಕರ್ಯಗಳ ಕೊರತೆಯಿದ್ದರೂ ಕಳೆದ ಸಾಲಿನಲ್ಲಿ ಬಿ.ಎ. ವಿಭಾಗದಲ್ಲಿ 95%, ಬಿ.ಕಾಂ.ನಲ್ಲಿ 98% ಬಂದಿದ್ದು ನಾಲ್ಕು ಸ್ವರ್ಣ ಪದಕಗಳು ಬಂದಿದೆ ಎಂದು ತಿಳಿಸಿದರು. 

 ತಿರುಮಲೆ ತಿರುಪತಿ ಸಲಹಾ ಸಮಿತಿ ಸದಸ್ಯ ಶ್ರಿನಿವಾಸಯ್ಯ,  ಪ್ರಾಧ್ಯಾಪಕರಾದ  ವೃಷ ಭೇಂದ್ರಮೂರ್ತಿ, ರತ್ನಮ್ಮ, ಮುತ್ತರಾಜು, ರೇಖಾ, ಸ್ಮಿತಾ, ಅನಿಲ್‌ಕುಮಾರ್ ಇತರರು ಇದ್ದರು.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.