ADVERTISEMENT

‘ಕಳಂಕಿತ ರಾಷ್ಟ್ರೀಯ ಪಕ್ಷಗಳನ್ನು ದೂರವಿಡಿ’

​ಪ್ರಜಾವಾಣಿ ವಾರ್ತೆ
Published 28 ಏಪ್ರಿಲ್ 2018, 13:15 IST
Last Updated 28 ಏಪ್ರಿಲ್ 2018, 13:15 IST

ಮರಳವಾಡಿ (ಕನಕಪುರ): ಭ್ರಷ್ಟಾಚಾರದಲ್ಲಿ ಮುಳುಗಿರುವ ರಾಷ್ಟ್ರೀಯ ಪಕ್ಷಗಳಾದ ಕಾಂಗ್ರೆಸ್ ಮತ್ತು ಬಿಜೆಪಿ ಕಿತ್ತೊಗೆದು ಪ್ರದೇಶಿಕ ಪಕ್ಷವಾದ ಜೆಡಿಎಸ್‌ ಅನ್ನು ಅಧಿಕಾರಕ್ಕೆ ತರಬೇಕೆಂದು ಕಾರ್ಯಕರ್ತರಿಗೆ ಜೆಡಿಎಸ್‌ ನಾಯಕಿ ಅನಿತಾ ಕುಮಾರಸ್ವಾಮಿ ಕರೆ ನೀಡಿದರು.

ತಾಲ್ಲೂಕಿನ ಮರಳವಾಡಿ ಹೋಬಳಿಯ ತಟ್ಟೆಕೆರೆ ಗ್ರಾಮದ ಬಳಿ ಇರುವ ಕಣಿವೆ ಮಾದೇಶ್ವರ ದೇವಾಲಯದಲ್ಲಿ ಪೂಜೆ ಸಲ್ಲಿಸಿ ನಂತರ ಎಚ್.ಡಿ.ಕುಮಾರಸ್ವಾಮಿ ಪರ ಮತಯಾಚನೆ ಮಾಡಿ ಬಳಿಕ, ಮರಳವಾಡಿ ಬಸ್‌ ನಿಲ್ದಾಣದಲ್ಲಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದರು.

‘ಕಳೆದ 10ವರ್ಷಗಳಲ್ಲಿ ಎರಡು ರಾಷ್ಟ್ರೀಯ ಪಕ್ಷಗಳು ರಾಜ್ಯವನ್ನು ಲೂಟಿ ಹೊಡೆದು ಜನರ ಮೇಲೆ ಸಾಲ ಹೊರಿಸಿ ಭ್ರಷ್ಟಾಚಾರದಲ್ಲಿ ಮುಳುಗಿವೆ.ಈ ಎರಡು ಪಕ್ಷದವರನ್ನು ಧಿಕ್ಕರಿಸಬೇಕೆಂದು’ ಕರೆ ನೀಡಿದರು.

ADVERTISEMENT

ಎಚ್.ಡಿ.ಕುಮಾರಸ್ವಾಮಿ ರಾಜ್ಯದ ಬಡ ಹೆಣ್ಣುಮಕ್ಕಳಿಗೆ ಭಾಗ್ಯಲಕ್ಷ್ಮಿ ಯೋಜನೆ ಜಾರಿಗೆ ತಂದರು. ವಿದ್ಯಾರ್ಥಿ
ಗಳಿಗೆ ಸೈಕಲ್ ವಿತರಣೆ, ₹100 ಇದ್ದ ಮಾಸಾಶನ ₹500ಕ್ಕೆ ಹೆಚ್ಚಿಸಿ ಜನಸಾಮಾನ್ಯರ ಪಾಲಿಗೆ 20ತಿಂಗಳ ಅವಧಿಯ ಆಡಳಿತದಲ್ಲಿ ಹಿಂದೆಂದು ಮಾಡಿರದ ಅಭಿವೃದ್ಧಿ ಕೆಲಸಗಳನ್ನು ಮಾಡಿ ರಾಜ್ಯವನ್ನು ಅಭಿವೃದ್ಧಿ ಉತ್ತುಂಗಕ್ಕೆ ಕೊಂಡೊಯ್ದರು, ಮತ್ತೊಮ್ಮೆ ಒಂದು ಅವಕಾಶ ನೀಡಬೇಕೆಂದು ಹೇಳಿದರು.

ಜೆಡಿಎಸ್ ಹಿರಿಯ ಮುಖಂಡ ಡಿ.ಎಂ.ವಿಶ್ವನಾಥ್, ಜಿಲ್ಲಾ ಜೆಡಿಎಸ್ ಉಪಾಧ್ಯಕ್ಷ ರಾಮಕೃಷ್ಣ, ಜಿ.ಪಂ.ಮಾಜಿ ಸದಸ್ಯ ಡಿ.ಎಸ್‌.ಭುಜಂಗಯ್ಯ,ತಾ ಪಂ.ಸದಸ್ಯ ಕೆ.ಎನ್.ರಾಮು, ಗ್ರಾ.ಪಂ.ಮಾಜಿ ಅಧ್ಯಕ್ಷ ಭೈರೇಗೌಡ, ಮರಳವಾಡಿ ಹೋಬಳಿ ಘಟಕದ ಜೆಡಿಎಸ್ ಅಧ್ಯಕ್ಷ ತಮ್ಮಯ್ಯ, ಹಾರೋಹಳ್ಳಿ ಹೋಬಳಿ ಯುವ ಘಟಕದ ಜೆಡಿಎಸ್ ಅಧ್ಯಕ್ಷ ಪ್ರದೀಪ್‌ಕುಮಾರ್, ಎಚ್‌ಡಿಕೆ ಸೇನೆ ಕಾರ್ಯಕರ್ತರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.