ADVERTISEMENT

ಕಾಂಗ್ರೆಸ್ ವರ್ತನೆ; ಲಿಂಗಪ್ಪ ಕ್ಷಮೆಯಾಚನೆ

​ಪ್ರಜಾವಾಣಿ ವಾರ್ತೆ
Published 18 ಅಕ್ಟೋಬರ್ 2011, 19:30 IST
Last Updated 18 ಅಕ್ಟೋಬರ್ 2011, 19:30 IST

ರಾಮನಗರ: ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಲೋಕಾಯುಕ್ತ ವಿಶೇಷ ನ್ಯಾಯಾಲಯ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ ಸಂದರ್ಭದಲ್ಲಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ಮುಖಂಡರು ವರ್ತಿಸಿದ ರೀತಿಗೆ ಮಾಜಿ ಶಾಸಕ ಸಿ.ಎಂ.ಲಿಂಗಪ್ಪ ಅವರು ವೈಯುಕ್ತಿಕವಾಗಿ ಕ್ಷಮೆ ಯಾಚಿಸಿದ್ದಾರೆ.

ರಾಜಕೀಯ ಜೀವನ ಯಾರಿಗೂ ಶಾಶ್ವತವಲ್ಲ. ಇದನ್ನು ತಿಳಿದಿರುವ ಸಿದ್ದರಾಮಯ್ಯ ಅವರು ವರ್ತಿಸಿರುವ ರೀತಿ 125 ವರ್ಷಗಳ ಇತಿಹಾಸ ಹೊಂದಿರುವ ಕಾಂಗ್ರೆಸ್ ಪಕ್ಷದ ಘನತೆಗೆ ಕುಂದುಂಟು ಮಾಡಿದೆ ಎಂದು ಕಾಂಗ್ರೆಸ್‌ನ ಹಿರಿಯ ಕಾರ್ಯಕರ್ತರೂ ಆಗಿರುವ ಅವರು ಪ್ರಕಟಣೆಯಲ್ಲಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಯಡಿಯೂರಪ್ಪ ಅವರಿಗೆ ಒಂದು ವಾರ ನ್ಯಾಯಾಂಗ ಬಂಧನ ಆಗಿರುವುದನ್ನೇ ತಮ್ಮ ಜೀವಿತ ಕಾಲದ ವೈಯುಕ್ತಿಕ ಸಾಧನೆ ಎಂದು ತಿಳಿದು ವಿರೋಧ ಪಕ್ಷದ ನಾಯಕ ಸಿದ್ಧರಾಮಯ್ಯ ಅವರು ಶಿವಮೊಗ್ಗದ ಕಾಂಗ್ರೆಸ್ ಸಮಾವೇಶದಲ್ಲಿ ನೃತ್ಯ ಮಾಡಿ ಸಂತೋಷ ವ್ಯಕ್ತಪಡಿಸಿರುವುದು ಶೋಭೆ ತರುವ ವಿಚಾರವಲ್ಲ ಎಂದು ಅವರು ಕಿಡಿಕಾರಿದ್ದಾರೆ.

ಸಿದ್ದರಾಮಯ್ಯ ನಡೆದುಕೊಂಡಿರುವ ರೀತಿ ಕಾಂಗ್ರೆಸ್ ಪಕ್ಷದ ಸಂಸ್ಕೃತಿಗೆ ಅನುಗುಣವಾಗಿಲ್ಲ ಎಂಬುದು ವಾಸ್ತವವಾಗಿದ್ದು, ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತರಾದ ನಮಗೆಲರಿಗೂ ಅವರ ನಡವಳಿಕೆ ಯಿಂದ ಬೇಸರವಾಗಿದ್ದು ರಾಜ್ಯದ ಜನರ ಕ್ಷಮೆ ಕೋರುತ್ತೇವೆ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.