ADVERTISEMENT

ಕೆರೆಯಲ್ಲಿ ಮುಳುಗಿದ ಕಾರ್‌: ಮೂವರ ದುರ್ಮರಣ

​ಪ್ರಜಾವಾಣಿ ವಾರ್ತೆ
Published 20 ಅಕ್ಟೋಬರ್ 2017, 9:22 IST
Last Updated 20 ಅಕ್ಟೋಬರ್ 2017, 9:22 IST

ರಾಮನಗರ: ತಾಲ್ಲೂಕಿನ ಬಿಡದಿ ಹೋಬಳಿಯ ಮನಗಾನಹಳ್ಳಿ ಬಳಿ ಬುಧವಾರ ರಾತ್ರಿ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಬಿದ್ದಿದ್ದು, ಇಬ್ಬರು ಮಕ್ಕಳು ಸೇರಿದಂತೆ ಮೂವರು ಸ್ಥಳದಲ್ಲಿಯೇ ಮೃತಪಟ್ಟರು.

ಕನಕಪುರ ತಾಲ್ಲೂಕಿನ ಗೊಟ್ಟಿಗೆಹಳ್ಳಿ ಗ್ರಾಮದ ಚಿದಾನಂದ್‌(24), ಅವರ ಅಕ್ಕನ ಮಕ್ಕಳಾದ ಶಶಾಂಕ್‌ (6), ಇಂಪನಾ (4) ಮೃತರು. ಕಾರಿನಲ್ಲಿದ್ದ ಮತ್ತೊಬ್ಬ ಬಾಲಕ ದಿಲೀಪ್‌ (12) ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಚಿದಾನಂದ್ ತನ್ನ ಅಕ್ಕನ ಮಕ್ಕಳನ್ನು ಕರೆದುಕೊಂಡು ಸಿದ್ದಯ್ಯನದೊಡ್ಡಿಯಲ್ಲಿರುವ ಸಂಬಂಧಿಕರ ಮನೆಗೆ ದೀಪಾವಳಿ ಹಬ್ಬಕ್ಕೆಂದು ಹೊರಟಿದ್ದರು. ಮನಗಾನಹಳ್ಳಿ ಸಮೀಪ ರಸ್ತೆ ತಿರುವಿನಲ್ಲಿ ಕಾರು ನಿಯಂತ್ರಣ ತಪ್ಪಿ ಪಕ್ಕದಲ್ಲಿನ ಕೆರೆಗೆ ಇಳಿಯಿತು.

ADVERTISEMENT

ಕೂಡಲೇ ಪಕ್ಕದಲ್ಲಿದ್ದ ಗ್ರಾಮಸ್ಥರು ಅವರ ರಕ್ಷಣೆಗೆ ಮುಂದಾದರು. ದಿಲೀಪ್‌ ಮಾತ್ರ ಬದುಕಿ ಉಳಿದಿದ್ದು, ಉಳಿದ ಮೂವರು ಅಷ್ಟರಲ್ಲಾಗಲೇ ನೀರಿನೊಳಗೆ ಉಸಿರುಗಟ್ಟಿ ಮೃತಪಟ್ಟಿದ್ದರು ಎಂದು ಪೊಲೀಸರು ತಿಳಿಸಿದರು.

ರಾಜರಾಜೇಶ್ವರಿ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆಯ ಬಳಿಕ ಶವಗಳನ್ನು ಪೋಷಕರ ವಶಕ್ಕೆ ಒಪ್ಪಿಸಲಾಯಿತು. ಈ ಸಂದರ್ಭ ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿತ್ತು. ಬಿಡದಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.