ADVERTISEMENT

ತಾಂತ್ರಿಕ ಆವಿಷ್ಕಾರಗಳಿಗೆ ಆದ್ಯತೆ ನೀಡಿ

​ಪ್ರಜಾವಾಣಿ ವಾರ್ತೆ
Published 11 ಮಾರ್ಚ್ 2012, 19:30 IST
Last Updated 11 ಮಾರ್ಚ್ 2012, 19:30 IST

ಚನ್ನಪಟ್ಟಣ: ವಿದ್ಯಾರ್ಥಿಗಳು ತಾಂತ್ರಿಕ ಕ್ಷೇತ್ರದಲ್ಲಿ ನೂತನ ಆವಿಷ್ಕಾರ ಮತ್ತು ಸಂಶೋಧನೆಗಳಿಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಅರಣ್ಯ ಸಚಿವ ಸಿ.ಪಿ.ಯೋಗೇಶ್ವರ್ ಹೇಳಿದರು.

ಕೊಲ್ಲಾಪುರದಮ್ಮ ದೇವಸ್ಥಾನದ ಆವರಣದಲ್ಲಿ ಶುಕ್ರವಾರ ನಡೆದ ಟೆಕ್ನೊ-ಎಕ್ಸ್ಪೊ ತಾಂತ್ರಿಕ ವಸ್ತು ಪ್ರದರ್ಶನ ಉದ್ಘಾಟಿಸಿ ಅವರು ಮಾತನಾಡಿದರು.ಜಿಲ್ಲಾ ಕೈಗಾರಿಕಾ ಜಂಟಿ ನಿರ್ದೇಶಕ ಬಾಲ್ಯನಾಯಕ್ ಮಾತನಾಡಿದರು.
ಸಿಂ.ಲಿಂ.ನಾಗರಾಜು ಅಧ್ಯಕ್ಷತೆ ವಹಿಸಿದ್ದರು.
 
ಧರ್ಮಗುರುಗಳಾದ ಕುಂದ್‌ಮೇರಿ ಸಾಹಿದ್, ರೆವರೆಂಡ್ ಮೋಸೆಸ್ ಪ್ರಭಾಕರ್, ವಿದ್ಯಾಸಂಸ್ಥೆ ಸಂಸ್ಥಾಪಕ ಮಂಜುನಾಥ್, ಅಧ್ಯಕ್ಷೆ ರೋಹಿಣಿ, ಆಡಳಿತಾಧಿಕಾರಿ ವೆಂಕಟೇಶಯ್ಯ, ನಗರಸಭಾ ಸದಸ್ಯ ಪುರುಷೋತ್ತಮ್, ಗುರುಮೂರ್ತಿ ಇದ್ದರು.

ಸಮಾರೋಪ: ಸಂಜೆ ನಡೆದ ಸಮಾರೋಪದಲ್ಲಿ  ನಗರಸಭಾ ಅಧ್ಯಕ್ಷೆ ರೇಷ್ಮಾಭಾನು, ಉಪಾಧ್ಯಕ್ಷ ಕೆ.ಎಲ್.ಕುಮಾರ್, ಹಾಪ್‌ಕಾಮ್ಸ ನಿರ್ದೇಶಕ ಎಸ್.ಸಿ.ಶೇಖರ್, ಸರ್ಕಾರಿ ನೌಕರರ ಸಂಘದ ತಾಲ್ಲೂಕು ಅಧ್ಯಕ್ಷ ನಾರಾಯಣಗೌಡ, ಜಿ.ಪಂ. ಎಂಜಿನಿಯರಿಂಗ್ ವಿಭಾಗದ ಚಿಕ್ಕ ವೆಂಕಟೇಶ್, ಸಂಸ್ಥೆಯ ಸಂಸ್ಥಾಪಕ ಮಂಜುನಾಥ್ ಇತರರು ಇದ್ದರು. ಎಸ್‌ಎಲ್‌ಎನ್‌ಎಮ್ ಸಮೂಹ ಶಿಕ್ಷಣ ಸಂಸ್ಥೆ ಕಾರ್ಯಕ್ರಮ ಆಯೋಜಿಸಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.