ADVERTISEMENT

`ದಿಕ್ಕುತಪ್ಪಿಸುತ್ತಿರುವ ಅಂತರ್ಜಾಲ'

​ಪ್ರಜಾವಾಣಿ ವಾರ್ತೆ
Published 6 ಸೆಪ್ಟೆಂಬರ್ 2013, 9:33 IST
Last Updated 6 ಸೆಪ್ಟೆಂಬರ್ 2013, 9:33 IST

ರಾಮನಗರ: ಇಂದಿನ ಯುವ ಜನಾಂಗ ಪಾಶ್ಚಾತ್ಯ ಸಂಸ್ಕೃತಿಯ ಅಂಧಾನುಕರಣೆಯಿಂದ ದಾರಿ ತಪ್ಪುವ ಸಾಧ್ಯತೆಗಳಿವೆ. ಅಂತರ್ಜಾಲದಂತಹ ಮಾಧ್ಯಮಗಳು ಯುವ ಜನತೆಯ ಮನಸ್ಸಿನ ಮೇಲೆ ಗಂಭೀರ ಪರಿಣಾಮ ಬೀರುತ್ತಿವೆ ಎಂದು ಆರ್‌ಎಸ್‌ಎಸ್‌ನ ವಿಭಾಗ ಸಂಪರ್ಕ ಪ್ರಮುಖ್ ಪ್ರಕಾಶ್‌ರಾಜ್ ಕಳವಳ ವ್ಯಕ್ತಪಡಿಸಿದರು.

ಸ್ವಾಮಿ ವಿವೇಕಾನಂದರ 150ನೇ ಜನ್ಮ ವರ್ಷಾಚರಣೆ ಸಮಿತಿಯ ಜಿಲ್ಲಾ ಘಟಕದ ವತಿಯಿಂದ ನಗರದ ಬಸವೇಶ್ವರ ಪ್ರಾರ್ಥನಾ ಮಂದಿರದಲ್ಲಿ ಮಂಗಳವಾರ ನಡೆದ ಯುವ ಸಮಾವೇಶವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಜಿಲ್ಲಾ ಶಾರೀರಿಕ್ ಪ್ರಮುಖ್ ಆರ್.ಕೆ. ಸತೀಶ್ ಮಾತನಾಡಿ, ಸಮಕಾಲೀನ ಸವಾಲುಗಳನ್ನು ಎದುರಿಸುವ ಸಂದರ್ಭದಲ್ಲಿ ಸ್ವಾಮಿ ವಿವೇಕಾನಂದರ ಚಿಂತನೆಗಳು ಅನಿವಾರ್ಯ. ಅವರ ಚಿಂತನೆಗಳನ್ನು ಅನುಸರಿಸುವುದೇ ವಿವೇಕಾನಂದರಿಗೆ ನಾವು ಸಲ್ಲಿಸಬಹುದಾದ ಗೌರವ ಎಂದು ತಿಳಿಸಿದರು.

ಆರ್‌ಎಸ್‌ಎಸ್‌ನ ವಿಭಾಗ ಪ್ರಚಾರಕ ಬಸವರಾಜ್, ಅಕ್ಷಯ ಕುಮಾರ್, ಪದಾಧಿಕಾರಿಗಳಾದ ಅನಿಲ್ ಬಾಬು, ಶ್ರೇಯಸ್, ರವೀಂದ್ರ ಹಾಗೂ ಇತರರು ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.