ಕನಕಪುರ: ಪಟ್ಟಣದ ರೂರಲ್ ವಿದ್ಯಾಸಂಸ್ಥೆಯ ದಯಾನಂದ ವಸತಿ ಶಾಲೆಯಲ್ಲಿ ವಾರ್ಷಿಕೋತ್ಸವದ ಅಂಗವಾಗಿ ಮಕ್ಕಳ ಸಡಗರದ ಹಬ್ಬ ಕಾರ್ಯಕ್ರಮ ನಡೆಯಿತು.
ಪುಟಾಣಿ ಮಕ್ಕಳು ವಿವಿಧ ರೀತಿಯ ಕಾರ್ಯಕ್ರಮಗಳನ್ನು ಪ್ರದರ್ಶನ ಮಾಡುವ ಮೂಲಕ ತಮ್ಮ ಪ್ರತಿಭೆಗಳನ್ನು ಅನಾವರಣಗೊಳಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಆರ್.ಇ.ಎಸ್.ನ ಉಪಾಧ್ಯಕ್ಷ ಲಕ್ಷ್ಮಣ್ ಮಾತನಾಡಿ, ‘ಮಕ್ಕಳಲ್ಲಿ ಅಗಾಧ ಪ್ರತಿಭೆಯನ್ನು ಗುರುತಿಸಿ ಶಿಕ್ಷಕರು ಉತ್ತೇಜನ ನೀಡಿದ್ದರ ಫಲವಾಗಿ ಇಂದು ವೇದಿಕೆ ಮೇಲೆ ಅಚ್ಚರಿಗೊಳ್ಳುವಂತಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಆರ್.ಇ.ಎಸ್. ಅಧ್ಯಕ್ಷ ಕೆ.ಜಿ.ತಿಮ್ಮಪ್ಪ ಮಾತನಾಡಿದರು. ಕಾರ್ಯದರ್ಶಿ ಸಿ.ರಮೇಶ್, ಡಿ.ವಿ.ವಿ. ಶಿಕ್ಷಕರು ಮತ್ತು ಸಿಬ್ಬಂದಿ ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.