ADVERTISEMENT

ರಕ್ತದಾನ ಮಾಡಿ ಪ್ರಾಣ ಉಳಿಸಿ

​ಪ್ರಜಾವಾಣಿ ವಾರ್ತೆ
Published 11 ಮಾರ್ಚ್ 2012, 19:30 IST
Last Updated 11 ಮಾರ್ಚ್ 2012, 19:30 IST

ಕನಕಪುರ: ರಕ್ತದಾನ ಮಾಡುವ ಮೂಲಕ ಮತ್ತೊಬ್ಬರ ಅತ್ಯಮೂಲ್ಯ ಜೀವವನ್ನು ಕಾಪಾಡಬೇಕೆಂದು ವನ್ಯಜೀವಿ ವಲಯಾಧಿಕಾರಿ ಸುನಿತಾಬಾಯಿ ಹೇಳಿದರು.ಪಟ್ಟಣದ ಕೋಟೆ ಗಣಪತಿ ದೇವಸ್ಥಾನದ ಆವರಣದಲ್ಲಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ವತಿಯಿಂದ ನಡೆದ ಸ್ವಯಂಪ್ರೇರಿತ ರಕ್ತದಾನ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು.

ರಕ್ತದ ಅಗತ್ಯ ಇರುವವರಿಗೆ ಸಕಾಲದಲ್ಲಿ ರಕ್ತದಾನ ಮಾಡಿದರೆ ಅವರ ಪ್ರಾಣ ಉಳಿಸಬಹುದು. ಆದ್ದರಿಂದ ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ರಕ್ತದಾನ ಶಿಬಿರಗಳಲ್ಲಿ ಪಾಲ್ಗೊಂಡು ರಕ್ತದಾನ ಮಾಡಬೇಕು ಎಂದು  ಅವರು ತಿಳಿಸಿದರು.

ಬೆಳಿಗ್ಗೆ 9ರಿಂದ ಮಧ್ಯಾಹ್ನ 3 ಗಂಟೆಯವರೆಗೆ ರಕ್ತದಾನ ಶಿಬಿರ ನಡೆಯಿತು.
ಎಬಿವಿಪಿ ಜಿಲ್ಲಾ ಸಂಚಾಲಕ ರಘುರಾಂ, ತಾಲ್ಲೂಕು ಸಂಚಾಲಕ ಮಹೇಶ್, ಸಹ ಸಂಚಾಲಕ ಕಾರ್ತೀಕ್, ನಗರ ಕಾರ್ಯದರ್ಶಿ ರಾಘವೇಂದ್ರ, ಬಸವರಾಜು ಇತರರು ಭಾಗವಹಿಸಿದ್ದರು. ಹುತಾತ್ಮ ಚಂದ್ರಶೇಖರ್ ಆಜಾದ್, ರಾಜಗುರು, ಸುಖದೇವ್ ಮತ್ತು ಭಗತ್ ಸಿಂಗ್‌ರ ಸ್ಮರಣಾರ್ಥ ಶಿಬಿರ ಏರ್ಪಡಿಸಲಾಗಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.