ರಾಮನಗರ: ಪ್ರಸಕ್ತ ಸಾಲಿನಲ್ಲಿ (2012-13) ಜಿಲ್ಲೆಯ ವಿವಿಧ ಕ್ಷೇತ್ರಗಳಿಗೆ 817.54 ಕೋಟಿ ರೂಪಾಯಿ ಸಾಲ ಯೋಜನೆಯನ್ನು ಜಿಲ್ಲಾ ಲೀಡ್ ಬ್ಯಾಂಕ್ ಪ್ರಕಟಿಸಿದೆ. ಅದರಲ್ಲಿ ಕೃಷಿ ಕ್ಷೇತ್ರದ ಸಾಲಕ್ಕೆ ರೂ 495.01 ಕೋಟಿ, ಕೈಗಾರಿಕಾ ಕ್ಷೇತ್ರದ ಸಾಲಕ್ಕೆ ರೂ 50 ಕೋಟಿ, ವ್ಯಾಪಾರ ಮತ್ತು ಸೇವಾ ಕ್ಷೇತ್ರಕ್ಕೆ 119.45 ಕೋಟಿ ರೂಪಾಯಿ ಸಾಲ ಯೋಜನೆಯನ್ನು ಲೀಡ್ ಬ್ಯಾಂಕ್ ಸಿದ್ಧಪಡಿಸಿದೆ.
ಜಿಲ್ಲಾ ಮಟ್ಟದ ಪರಿಶೀಲನಾ ಸಮಿತಿ ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಸಿಇಒ ಕೆ.ಎಸ್.ವೆಂಕಟೇಶಪ್ಪ ಅವರು ಲೀಡ್ ಬ್ಯಾಂಕ್‌ನ 2012-13ನೇ ಸಾಲಿನ ಸಾಲ ಯೋಜನೆಯ ಕೈಪಿಡಿಯನ್ನು ಇತ್ತೀಚೆಗೆ ಬಿಡುಗಡೆ ಮಾಡಿದರು.
ಜಿಲ್ಲೆಯ ಕೃಷಿ, ಕೈಗಾರಿಕೆ, ವ್ಯಾಪಾರ- ವಾಣಿಜ್ಯ, ಶಿಕ್ಷಣ, ವಸತಿ, ಸಾರಿಗೆ ಸೇರಿದಂತೆ ಇತರ ಕ್ಷೇತ್ರಗಳಿಗೆ ವಾರ್ಷಿಕ ಸಾಲ ಯೋಜನೆಯನ್ನು ಲೀಡ್ ಬ್ಯಾಂಕ್ ಈ ಕೈಪಿಡಿಯಲ್ಲಿ ಪ್ರಕಟಿಸಿದೆ. ಜಿಲ್ಲಾ ವ್ಯಾಪ್ತಿಯ ಬ್ಯಾಂಕ್‌ಗಳಿಗೆ ನಿಗದಿತ ಗುರಿಯನ್ನು ತಲುಪಲು ಅಗತ್ಯ ಕಾರ್ಯಕ್ರಮ ಹಮ್ಮಿಕೊಂಡು ಕಾರ್ಯ ನಿರ್ವಹಿಸುವಂತೆ ಲೀಡ್ ಬ್ಯಾಂಕ್ ವ್ಯವಸ್ಥಾಪಕ ಎಚ್.ವೈ.ಅಭಿನಂದನ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪರಿಶೀಲನಾ ಸಭೆಯಲ್ಲಿ ಕಾರ್ಪೋರೇಷನ್ ಬ್ಯಾಂಕ್‌ನ ಉಪ ಪ್ರಧಾನ ವ್ಯವಸ್ಥಾಪಕ ಡಿ.ಎಂ.ಮಜುಂದಾರ್, ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಲೀಡ್ ಬ್ಯಾಂಕ್ ಅಧಿಕಾರಿ ಟಿ. ದೊರೈ, ನಬಾರ್ಡ್‌ನ ಜಿಲ್ಲಾ ಅಭಿವೃದ್ಧಿ ಅಧಿಕಾರಿ ಎಸ್. ಕಲ್ಯಾಣಸುಂದರಂ ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.