
ಪ್ರಜಾವಾಣಿ ವಾರ್ತೆರಾಮನಗರ: ನಗರದ ಕೆಂಪೇಗೌಡ ವೃತ್ತದ ಬಳಿ ಇರುವ ಮೊರಾರ್ಜಿ ದೇಸಾಯಿ ವಸತಿ ಶಾಲೆ ವಾರ್ಡನ್ ಎ.ಆರ್ . ನಾಗರಾಜ್ ನಾಯಕ ಅವರು ಶಾಲೆಯ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡುತ್ತಾರೆ ಎಂದು ಆರೋಪಿಸಿ ಅವರ ಮೇಲೆ ನೀಲಿ ಬಣ್ಣದ ಮಸಿ ಬಳಿದು ಪ್ರಜಾ ವಿಮೋಚನಾ ಚಳವಳಿಯ ಕಾರ್ಯಕರ್ತರು ಮಂಗಳವಾರ ಪ್ರತಿಭಟಿಸಿದರು.
ನಾಗರಾಜ್ ನಾಯಕ ಅವರು ಶಾಲೆ ವಿದ್ಯಾರ್ಥಿನಿಯರನ್ನು ಅವಾಚ್ಯವಾಗಿ ನಿಂದಿಸುತ್ತಾರೆ ಎಂದು ಪೋಷಕರಲ್ಲಿ ಮಕ್ಕಳು ಅಳಲು ತೋಡಿಕೊಂಡಿದರು. ಈ ಕುರಿತು ಪೋಷಕರು ದೂರು ನೀಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.