ADVERTISEMENT

`ಶಿಕ್ಷಕರ ಸ್ಥಾನ ದುರ್ಬಳಕೆ ಸಲ್ಲ'

​ಪ್ರಜಾವಾಣಿ ವಾರ್ತೆ
Published 6 ಸೆಪ್ಟೆಂಬರ್ 2013, 9:29 IST
Last Updated 6 ಸೆಪ್ಟೆಂಬರ್ 2013, 9:29 IST

ಕನಕಪುರ: `ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ನಗರ ಪ್ರದೇಶದ ವಿದ್ಯಾರ್ಥಿಗಳೊಂದಿಗೆ ಪೈಪೋಟಿ ಎದುರಿಸಬೇಕಾಗಿರುವುದರಿಂದ ಶಿಕ್ಷಕರು ತಳಹಂತದಲ್ಲಿಯೇ ಗುಣಮಟ್ಟದ ಶಿಕ್ಷಣ ನೀಡಿ ಉತ್ತಮ ತರಬೇತಿ ಜತೆ ಆದರ್ಶ ವಿದ್ಯಾರ್ಥಿಗಳನ್ನು ತಯಾರು ಮಾಡಬೇಕು' ಎಂದು ಶಾಸಕ ಡಿ.ಕೆ.ಶಿವಕುಮಾರ್ ಹೇಳಿದರು.

ಪಟ್ಟಣದ ಪುರಸಭೆ ಕ್ರೀಡಾಂಗಣದಲ್ಲಿ ರಾಮನಗರ ಜಿಲ್ಲಾ ಪಂಚಾಯಿತ್ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ ಸಂಯುಕ್ತ ಆಶ್ರಯದಲ್ಲಿ ಏರ್ಪಡಿಸಿದ್ದ ತಾಲ್ಲೂಕು ಮಟ್ಟದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

`ಶಿಕ್ಷಕರ ದಿನಾಚರಣೆಯನ್ನು ಕೇವಲ ಸರ್ಕಾರಿ ಶಾಲೆಗಳಲ್ಲಿ ಮಾಡಿದರೆ ಸಾಲದು, ಖಾಸಗಿ ಶಾಲೆಗಳು ಒಟ್ಟಾಗಿ ಅರ್ಥಪೂರ್ಣವಾಗಿ ಆಚರಣೆ ಮಾಡಬೇಕು, ಶಿಕ್ಷಣ ಮಂತ್ರಿಗಳೊಂದಿಗೆ ಚರ್ಚೆ ನಡಿಸಿದ್ದು ಕಾರ್ಯರೂಪಕ್ಕೆ ತರಲು ಪ್ರಯತ್ನಿಸಲಾಗುವುದು' ಎಂದರು.  

ಶಿಕ್ಷಣ ತಜ್ಞ ಪ್ರೊ.ಕೆ.ಇ.ರಾಧಾಕೃಷ್ಣ ಹಾಗೂ ಕನ್ನಡ ಭಾಷಾ ರಾಜ್ಯ ಸಂಪನ್ಮೂಲ ವ್ಯಕ್ತಿ ವಿ.ರಾಜಾ ಮಾತನಾಡಿ, `ಶಿಕ್ಷಕರ ತಮ್ಮ ಸ್ಥಾನ ದುರ್ಬಳಕೆ ಮಾಡಿಕೊಳ್ಳದೆ ಆದರ್ಶಪ್ರಾಯರಾಗಿ ಸಮಾಜ ಮುಖಿ ಚಿಂತನೆಯ ವಿದ್ಯಾರ್ಥಿಗಳನ್ನು ಬೆಳೆಸಬೇಕು' ಎಂದು ತಿಳಿಸಿದರು.

 ವಿಧಾನ ಪರಿಷತ್ ಮಾಜಿ ಸದಸ್ಯ ಎಸ್.ರವಿ, ತಾಲ್ಲೂಕು ಪಂಚಾಯಿತಿ ಅಧ್ಯಕ್ಷೆ ನಾಗರತ್ನಮ್ಮ. ಜಿ.ಪಂ.ಸದಸ್ಯರಾದ ವೆಂಕಟೇಶಯ್ಯ,
ವಿ,ಮಾದೇವಿ, ನಳಿನಾರವಿಶಂಕರ್, ಇ.ಓ.ಜೆ.ಜಿ.ನಾಯಕ್, ಬಿ.ಇ.ಒ.ಡಿ.ಶಿವಕುಮಾರ್, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ರಮೇಶ್,ಕಾರ್ಯದರ್ಶಿ ತಿಪ್ಪೇಸ್ವಾಮಿ, ಜಯರಾಮು, ರಾಜಣ್ಣ, ಪ್ರೇಮ, ನಾಗರತ್ನಮ್ಮ, ಪುರಸಭೆ ಸದಸ್ಯರಾದ ಆರ್,ಕೃಷ್ಣಮೂರ್ತಿ, ಕೆ.ಎನ್.ದಿಲೀಪ್.ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ ನಟರಾಜು ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.