ADVERTISEMENT

‘ಶಿಸ್ತುಬದ್ಧ ಅಧ್ಯಯನದಿಂದ ಯಶಸ್ಸು’

ಜಯಪುರ ಗ್ರಾಮದಲ್ಲಿ ಎನ್‌ಎಸ್‌ಎಸ್‌ ಶಿಬಿರ ಉದ್ಘಾಟನೆ

​ಪ್ರಜಾವಾಣಿ ವಾರ್ತೆ
Published 6 ಮಾರ್ಚ್ 2018, 12:31 IST
Last Updated 6 ಮಾರ್ಚ್ 2018, 12:31 IST
ಜಯಪುರ ಗ್ರಾಮದಲ್ಲಿ ಎನ್‌ಎಸ್‌ಎಸ್‌ ಶಿಬಿರದ ಅಂಗವಾಗಿ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿನಿಯರು ಸ್ವಚ್ಛತಾ ಅಭಿಯಾನ ನಡೆಸಿದರು
ಜಯಪುರ ಗ್ರಾಮದಲ್ಲಿ ಎನ್‌ಎಸ್‌ಎಸ್‌ ಶಿಬಿರದ ಅಂಗವಾಗಿ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿನಿಯರು ಸ್ವಚ್ಛತಾ ಅಭಿಯಾನ ನಡೆಸಿದರು   

ಕಸಬಾ (ರಾಮನಗರ): ವಿದ್ಯಾರ್ಥಿಗಳು ಸತತ ಪ್ರಯತ್ನ ಮತ್ತು ಕ್ರಮಬದ್ಧವಾದ ಅಧ್ಯಯನದಿಂದ ಉನ್ನತ ಸ್ಥಾನಮಾನದ ಹುದ್ದೆಗಳನ್ನು ಅಲಂಕರಿಸಲು ಸಾಧ್ಯ ಎಂದು ಬಿಳಗುಂಬ ಗ್ರಾಮ ಪಂಚಾಯಿತಿ ಅಧ್ಯಕ್ಷ ಎನ್. ರಮೇಶ್ ಅವರು ಹೇಳಿದರು.

ಇಲ್ಲಿನ ಜಯಪುರ ಗ್ರಾಮದಲ್ಲಿ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ವತಿಯಿಂದ ಭಾನುವಾರ ಸಂಜೆ ನಡೆದ ರಾಷ್ಟ್ರೀಯ ಸೇವಾ ಯೋಜನೆಯ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡಿದರು. ವಿದ್ಯಾರ್ಥಿಗಳು ಪದವಿ ಹಂತದಲ್ಲಿ ವ್ಯಾಸಂಗ ಮಾಡುವ ಅವಧಿಯಲ್ಲೇ ಸ್ಪರ್ಧಾತ್ಮಕ ಪರೀಕ್ಷೆಗಳಿಗೂ ಸಿದ್ಧರಾಗಬೇಕು. ಪ್ರತಿನಿತ್ಯವೂ ದಿನಪತ್ರಿಕೆಗಳನ್ನು ಓದುವುದರಿಂದ ಸಾಮಾನ್ಯ ಜ್ಞಾನ ವೃದ್ಧಿಯಾಗುತ್ತದೆ. ಜತೆಗೆ ಸಮಾಜದಲ್ಲಿ ದಿನನಿತ್ಯ ನಡೆಯುತ್ತಿರುವ ಚಟುವಟಿಕೆಗಳ ಬಗ್ಗೆ ತಿಳಿದುಕೊಳ್ಳಲು ಸಾಧ್ಯವಾಗುತ್ತದೆ ಎಂದು ತಿಳಿಸಿದರು.

ಜೆಡಿಎಸ್ ತಾಲ್ಲೂಕು ಘಟಕದ ಅಧ್ಯಕ್ಷ ರಾಜಶೇಖರ್, ಕಾಲೇಜಿನ ಪ್ರಾಚಾರ್ಯ ಪ್ರೊ. ಸಿ.ರಾಜಣ್ಣ ಮಾತನಾಡಿ ವಿದ್ಯಾರ್ಥಿಗಳು ಸಮಾಜ
ಮುಖಿಯಾಗಿ ಚಿಂತನೆ ಬೆಳೆಸಿಕೊಳ್ಳುವಂತೆ ಕಿವಿಮಾತು ಹೇಳಿದರು.

ADVERTISEMENT

ಶಿಬಿರಾಧಿಕಾರಿ ಬಿ.ಆರ್. ಉಮೇಶ್ ಮಾತನಾಡಿ, ರಾಷ್ಟ್ರೀಯ ಸೇವಾ ಯೋಜನೆಯ ಶಿಬಿರಗಳಿಂದ ವಿದ್ಯಾರ್ಥಿಗಳಲ್ಲಿರುವ ಕೀಳರಿಮೆ ದೂರವಾಗುತ್ತದೆ. ಸಮಾಜಮುಖಿಯಾಗಿ ಚಿಂತಿಸಲು ಸಾಧ್ಯವಾಗುತ್ತದೆ. ಶಿಬಿರದಲ್ಲಿ ವಿದ್ಯಾರ್ಥಿಗಳು ಮಾಡುವ ಶ್ರಮದಾನದಿಂದ ಗ್ರಾಮಗಳಲ್ಲಿರುವ ಸಮಸ್ಯೆಗಳು ಸ್ವಲ್ಪ ಪ್ರಮಾಣದಲ್ಲಾದರೂ ಬಗೆಹರಿಯುತ್ತವೆ ಎಂದರು.

ಗ್ರಾಮ ಪಂಚಾಯಿತಿ ಸದಸ್ಯರಾದ ಬೋರೇಗೌಡ, ಜಯಶೀಲ, ಜಯಪುರ ಶಾಲೆಯ ಎಸ್‌ಡಿಎಂಸಿ ಅಧ್ಯಕ್ಷ ವೆಂಕಟೇಶ್, ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಮಂಚಯ್ಯ, ಶಿಬಿರಾಧಿಕಾರಿ ಹೇಮಾನಾಯಕ್, ಸಹಶಿಬಿರಾಧಿಕಾರಿ ಎಂ.ಪಿ. ರೂಪಾ, ಸುನಂದಮ್ಮ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.