ADVERTISEMENT

ಸಣ್ಣ-ದೊಡ್ಡ ಕೈಗಾರಿಕೆಗಳ ಬಿಐಎ ಸಂಘ ಸ್ಥಾಪನೆ

​ಪ್ರಜಾವಾಣಿ ವಾರ್ತೆ
Published 24 ಫೆಬ್ರುವರಿ 2012, 19:30 IST
Last Updated 24 ಫೆಬ್ರುವರಿ 2012, 19:30 IST

ರಾಮನಗರ: ಬಿಡದಿ ಕೈಗಾರಿಕಾ ಪ್ರದೇಶದಲ್ಲಿ ಕಾರ್ಯ ನಿರ್ವಹಿಸುತ್ತಿರುವ ದೊಡ್ಡ ಹಾಗೂ ಸಣ್ಣ ಗಾತ್ರದ ಕೈಗಾರಿಕೆಗಳು ಜತೆಗೂಡಿ ಇತ್ತೀಚೆಗೆ ಬಿಡದಿ ಕೈಗಾರಿಕಾ ಸಂಘ(ಬಿಐಎ)  ಸ್ಥಾಪಿಸಿಕೊಂಡಿವೆ.

ಈ ಸಂಘವು ಕರ್ನಾಟಕ ಸಂಘಗಳ ನೋಂದಣಿ ಕಾಯ್ದೆಯಡಿ ನೋಂದಾಯಿತವಾಗಿದ್ದು, ಬಿಡದಿ ಕೈಗಾರಿಕಾ ಪ್ರದೇಶದಲ್ಲಿ ಕಾರ್ಯನಿರ್ವಹಿಸುತ್ತಿರುವ ಕೈಗಾರಿಕೆಗಳ ಹಿತ ಕಾಪಾಡುವ ಉದ್ದೇಶ ಹೊಂದಿದೆ ಎಂದು ಸಂಘದ ಅಧ್ಯಕ್ಷರಾದ ಟೊಯೋಟಾ ಕಿರ್ಲೋಸ್ಕರ್ ಮೋಟರ್ ಸಂಸ್ಥೆಯ ಹಿರಿಯ ಉಪಾಧ್ಯಕ್ಷ ಶ್ರೀಕಾಂತ್ ಪ್ರಕಟಣೆಯಲ್ಲಿ  ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ನಡೆದ ಸಮಾರಂಭವೊಂದರಲ್ಲಿ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿಯ ವಿಶೇಷ ಉಪ ಆಯುಕ್ತ ಬಿ. ಹೀರಾ ನಾಯಕ್ ಬಿಐಎ ಸಂಘವನ್ನು ಉದ್ಘಾಟಿಸಿದರು.

ಗ್ರೇಟರ್ ನೆಲಮಂಗಲ ಇಂಡಸ್ಟ್ರೀಸ್ ಅಸೋಸಿಯೇಷನ್ ಅಧ್ಯಕ್ಷ ಸಂತೋಷ್ ಕುಮಾರ್ ರೈ,  ಟೊಯೋಟಾ ಕಿರ್ಲೋಸ್ಕರ್ ಮೊಟಾರ್‌ನ ವ್ಯವಸ್ಥಾಪಕ ನಿರ್ದೇಶಕ ಹಿರೋಷಿ ನಾಕಾಗಾವ, ಸಂಘದ ಉಪಾಧ್ಯಕ್ಷ ನರಸಿಂಹನ್, ಕಾರ್ಯದರ್ಶಿ ನರಸಿಂಹ ಭಟ್, ಖಜಾಂಚಿ ಶುಭಕರ್ ಹಾಗೂ ಇತರರು ಸಂಘದ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಂಡಿದ್ದರು ಎಂದು ತಿಳಿಸಿದ್ದಾರೆ.

ಬಿಡದಿ ಕೈಗಾರಿಕಾ ಪ್ರದೇಶದಲ್ಲಿ ಪ್ರಸ್ತುತ 47 ದೊಡ್ಡ ಹಾಗೂ ಸಣ್ಣ ಕೈಗಾರಿಕೆಗಳು ಕಾರ್ಯ ನಿರ್ವಹಿಸುತ್ತಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.