ADVERTISEMENT

ಸವಿರುಚಿ ಕ್ಯಾಂಟೀನ್: ಸಿದ್ಧತೆಗೆ ಸೂಚನೆ

​ಪ್ರಜಾವಾಣಿ ವಾರ್ತೆ
Published 29 ನವೆಂಬರ್ 2017, 5:21 IST
Last Updated 29 ನವೆಂಬರ್ 2017, 5:21 IST

ರಾಮನಗರ: ಜಿಲ್ಲೆಯ ಸ್ತ್ರೀ ಶಕ್ತಿ ಒಕ್ಕೂಟಗಳ ಮೂಲಕ ಅನುಷ್ಠಾನ ಗೊಳಿಸಲು ಉದ್ದೇಶಿಸಲಾಗಿರುವ ಸವಿರುಚಿ ಸಂಚಾರಿ ಕ್ಯಾಂಟೀನ್ ಆರಂಭಕ್ಕೆ ಅಗತ್ಯವಿರುವ ಕ್ರಮಗಳನ್ನು ಕೈಗೊಳ್ಳು ವಂತೆ ಜಿಲ್ಲಾಧಿಕಾರಿ ಬಿ.ಆರ್. ಮಮತಾ ಸೂಚಿಸಿದರು.

ಇಲ್ಲಿನ ಜಿಲ್ಲಾ ಕಚೇರಿಗಳ ಸಂಕೀ ರ್ಣದ ಸಭಾಂಗಣದಲ್ಲಿ ಮಂಗಳ ವಾರ ನಡೆದ ಸವಿರುಚಿ ಸಂಚಾರಿ ಕ್ಯಾಂಟೀನ್ ಯೋಜನೆ ಅನುಷ್ಠಾನ ಕುರಿತ ಸಮನ್ವಯ ಸಮಿತಿ ಸಭೆಯಲ್ಲಿ ಅವರು ಮಾತನಾಡಿದರು.

‘ಈ ಸಾಲಿನ ಬಜೆಟ್‌ನಲ್ಲಿ ಮುಖ್ಯ ಮಂತ್ರಿಗಳು ಜಿಲ್ಲೆಗಳಲ್ಲಿ ಸ್ತ್ರೀ ಶಕ್ತಿ ಒಕ್ಕೂಟಗಳ ಮೂಲಕ ‘ಸವಿರುಚಿ ಸಂಚಾರಿ ಕ್ಯಾಂಟೀನ್’ ಆರಂಭಗೊಳಿ ಸುವ ಬಗ್ಗೆ ಪ್ರಕಟಿಸಿದ್ದರು, ಡಿಸೆಂಬರ್ 12ರಂದು ಮುಖ್ಯಮಂತ್ರಿ ಅವರು ಜಿಲ್ಲೆಯ ಪ್ರವಾಸ ಕೈಗೊಂಡಿದ್ದು, ಅಂದು ಚನ್ನಪಟ್ಟಣದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ಹಾಗೂ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ಅವರು ಹೇಳಿದರು.

ADVERTISEMENT

‘ಸಾಧ್ಯವಾದರೇ ಅಲ್ಲಿಯೇ ಈ ಕ್ಯಾಂಟೀನ್ ಅನ್ನು ಅವರಿಂದ ಉದ್ಘಾಟಿಸಬಹುದಾಗಿದೆ. ಇದಕ್ಕೆ ಪೂರ್ವಭಾವಿಯಾಗಿ ತುರ್ತಾಗಿ ಎಲ್ಲಾ ರೀತಿಯ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ತಿಳಿಸಿದರು.

‘ಸವಿರುಚಿ ಕ್ಯಾಂಟೀನ್‍ ನಲ್ಲಿ ಪ್ರಮುಖವಾಗಿ ರುಚಿ ಹಾಗೂ ಶುಚಿತ್ವ ವನ್ನು ಕಾಪಾಡಿಕೊಳ್ಳಬೇಕು, ಉತ್ತಮ ಯಾವ ಯಾವ ಸ್ಥಳಗಳಲ್ಲಿ ಮಾಡಬೇಕು ಎನ್ನುವ ಬಗ್ಗೆ ನಿರ್ದಿಷ್ಟತೆ ಇರಬೇಕು, ಈ ಕ್ಯಾಂಟಿನ್ ಇತರೆ ಕ್ಯಾಂಟೀನ್‍ಗಳಿಗಿಂತ ವಿಭಿನ್ನವಾಗಿರಬೇಕು’ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಮೇಶ್, ಕೈಗಾರಿಕಾ ಇಲಾಖೆಯ ಜಂಟಿ ನಿರ್ದೇಶಕ ಹೊನಮನಿ, ಸ್ತ್ರೀಶಕ್ತಿ ಒಕ್ಕೂಟಗಳ ಪ್ರತಿನಿಧಿಗಳು ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.