ADVERTISEMENT

ಸಹಾಯ ಹಸ್ತ ಸಪ್ತಾಹಕ್ಕೆ ಚಾಲನೆ

​ಪ್ರಜಾವಾಣಿ ವಾರ್ತೆ
Published 26 ನವೆಂಬರ್ 2012, 21:41 IST
Last Updated 26 ನವೆಂಬರ್ 2012, 21:41 IST

ರಾಮನಗರ: ತಾಲ್ಲೂಕು ಯುವ ಕಾಂಗ್ರೆಸ್ ವತಿಯಿಂದ ತಾಲ್ಲೂಕು ಕಚೇರಿ ಆವರಣದಲ್ಲಿ ಸಹಾಯ ಹಸ್ತ ಸಪ್ತಾಹಕ್ಕೆ ಸೋಮವಾರ ಚಾಲನೆ ದೊರೆಯಿತು.

ಜನರ ಕಷ್ಟಗಳ ಮತ್ತು ಕುಂದು ಕೊರತೆಗಳನ್ನು ವಿಚಾರಿಸಿ ಅವುಗಳಿಗೆ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಕಾಂಗ್ರೆಸ್ ಈ ಸಪ್ತಾಹ ನಡೆಸುತ್ತಿದೆ. ಸೋಮವಾರದಿಂದ ಆರಂಭಗೊಂಡಿರುವ ಈ ಸಪ್ತಾಹ ನವೆಂಬರ್ 30ರವರೆಗೆ ರಾಜ್ಯದ ಎಲ್ಲಾ ತಾಲ್ಲೂಕು ಕಚೇರಿ ಮುಂದೆ ಏಕ ಕಾಲದಲ್ಲಿ ನಡೆಯಲಿದೆ ಎಂದು ತಾಲ್ಲೂಕು ಕಾಂಗ್ರೆಸ್ ಘಟಕದ ಅಧ್ಯಕ್ಷ ಎಂ. ನವೀನ್‌ಗೌಡ ಅವರು ತಿಳಿಸಿದರು.

ಜನ ಸಾಮಾನ್ಯರಿಗೆ ಸಿಗಬೇಕಾದ ಪಡಿತರ ಚೀಟಿ, ವಿಧವಾ, ವೃದ್ಧಾಪ್ಯ, ಅಂಗವಿಕಲರ ವೇತನ, ಕೃಷಿ ಭೂಮಿ ಮತ್ತು ಕೃಷಿಯೇತರ ಭೂಮಿ ಪರಿವರ್ತನೆ, ಜಾತಿ, ವಾಸ ಸ್ಥಳದ, ಜನನ ಮತ್ತು ಮರಣ ಪ್ರಮಾಣ ಪತ್ರ, ಭಾಗ್ಯಲಕ್ಷ್ಮೀ ಯೋಜನೆ ಸೇರಿದಂತೆ ಮತ್ತಿತರ ಸೇವೆಗಳ ಬಗ್ಗೆ ತಾಲ್ಲೂಕು ಕಚೇರಿ ಆವರಣದಲ್ಲಿ ಯುವ ಕಾಂಗ್ರೆಸ್ ಪದಾಧಿಕಾರಿಗಳು ನೆರವು ನೀಡಿದರು.


ಬೆಂಗಳೂರು ಗ್ರಾಮಾಂತರ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೇಬಲ್‌ರಾಜು, ಉಪಾಧ್ಯಕ್ಷರಾದ ಅನಿಲ್ ಜೋಗಿಂದರ್, ಕೃಷ್ಣ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT