
ಕನಕಪುರ: ನ್ಯಾಯಾಲಯ ಆವರಣದಲ್ಲಿ ಗುರುವಾರ ನಡೆದ ಎಚ್‌ಐವಿ ಜಾಗೃತಿ ಜಾಥೆಗೆ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ಎಚ್.ಎನ್.ಕುಮಾರ್ ಚಾಲನೆ ನೀಡಿದರು.
ಉತ್ತಮ ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ಎಲ್ಲರೂ ಆರೋಗ್ಯಕರ ಜೀವನಶೈಲಿ ಅಳವಡಿಸಿಕೊಳ್ಳಬೇಕು. ಎಚ್ಐವಿ ಬಗ್ಗೆ ಜನರಲ್ಲಿ ತಿಳಿವಳಿಕೆ ಮೂಡಿಸಲು ಈ ಜಾಥಾ ಏರ್ಪಡಿಸಲಾಗಿದೆ ಎಂದು ತಿಳಿಸಿದರು.
ಐಪಿಪಿ ಆಸ್ಪತ್ರೆ ಆಡಳಿತ ಅಧಿಕಾರಿ ಡಾ.ಪ್ರಥಿಮಾ, ಎಚ್ಐವಿ ವೈರಸ್ ಮನುಷ್ಯನ ರೋಗ ನಿರೋಧಕ ಶಕ್ತಿಯನ್ನು ನಾಶಪಡಿಸುತ್ತದೆ. ಸೋಂಕಿತರಿಗೆ ಸರ್ಕಾರಿ ಆಸ್ಪತ್ರೆಗಳಲ್ಲಿ ಗೌಪ್ಯತೆ ಮತ್ತು ಉಚಿತ ಚಿಕಿತ್ಸೆ ಲಭ್ಯವಿದೆ ಎಂದು ಹೇಳಿದರು.
ವಿದ್ಯಾರ್ಥಿಗಳು ಬೀದಿಗಳಲ್ಲಿ ಬಿತ್ತಿ ಪತ್ರ ಹಂಚಿ ಜಾಗೃತಿ ಮೂಡಿಸಿದರು.
ಕನಕಪುರ: ಕಾನೂನು ಸೇವಾ ಸಮಿತಿ ಮತ್ತು ವಕೀಲರ ಸಂಘ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಹಯೋಗದಲ್ಲಿ ನ್ಯಾಯಾಲಯದ ಆವರಣದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಏಡ್ಸ್ ಜಾಗೃತಿ ಜಾಥಕ್ಕೆ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಎಚ್.ಎನ್.ಕುಮಾರ್ ಚಾಲನೆ ನೀಡಿದರು.
ಈ ವೇಳೆ ಅವರು ಮಾತನಾಡಿ ಉತ್ತಮ ಆರೋಗ್ಯವಂತ ಸಮಾಜ ನಿರ್ಮಾಣವಾಗಬೇಕಾದರೆ ಎಲ್ಲರೂ ಆರೋಗ್ಯವಂತ ರಾಗಿರಬೇಕು, ಉತ್ತಮ ಜೀವನ ಶೈಲಿಯನ್ನು ರೂಡಿಸಿಕೊಳ್ಳಬೇಕೆಂದು ತಿಳಿಸಿದರು.
ಏಡ್ಸ್ ಮುಕ್ತ ಸಮಾಜ ಮಾಡಬೇಕಾದರೆ ಇದರ ಬಗ್ಗೆ ಪ್ರತಿಯೊಬ್ಬರಿಗೂ ಅರಿವಿರಬೇಕು, ಜನರಲ್ಲಿ ಇದರ ಬಗ್ಗೆ ಜಾಗೃತಿ ಇರಬೇಕು ಅದಕ್ಕಾಗಿ ಜಾಗೃತಿ ಮೂಡಿಸಲು ಇಂದು ಜಾಗೃತಿ ಜಾಥವನ್ನು ನಡೆಸಲಾಗುತ್ತಿದೆ ಎಂದು ಹೇಳಿದರು.
ಐಪಿಪಿ ಆಸ್ಪತ್ರೆ ಆಡಳಿತ ಅಧಿಕಾರಿ ಡಾ.ಪ್ರಥಿಮಾ ಮಾತನಾಡಿ ಎಚ್ಐವಿ ವೈರಸ್ ಮನುಷ್ಯನ ರೋಗ ನಿರೋಧಕ ಶಕ್ತಿಯನ್ನು ನಾಶಗೊಳಿಸುತ್ತಾ ಹೋಗುತ್ತದೆ. ಈ ಕಾಯಿಲೆಯನ್ನು ಸಂಪೂರ್ಣವಾಗಿ ಗುಣಪಡಿಸಲು ಸಾಧ್ಯವಿಲ್ಲ, ಸೋಂಕಿತರಿಗೆ ಸರ್ಕಾರಿ ಆಸ್ಪತ್ರೆಗಳಲ್ಲಿ ಗೌಪ್ಯ ಮತ್ತು ಉಚಿತವಾಗಿ ಚಿಕಿತ್ಸೆ ನೀಡಲಾಗುತ್ತದೆ ಎಂದು ತಿಳಿಸಿದರು.
ಕಾಲೇಜು ವಿದ್ಯಾರ್ಥಿಗಳು ಏಡ್ಸ್ ಜಾಗೃತಿಯ ಬಿತ್ತಿ ಪತ್ರಗಳನ್ನು ಕೈಯಲ್ಲಿ ಹಿಡಿದು ಮುಖ್ಯ ರಸ್ತೆಯಲ್ಲಿ ಜಾಗೃತಿ ಮೂಡಿಸಿದರು.
ಹಿರಿಯ ಸಿವಿಲ್ ನ್ಯಾಯಾಧೀಶರಾದ ಕೆ.ಎ.ನಾಗೇಶ್, ಎಸ್.ರಾಧ, ಎರಡನೇ ಸಿವಿಲ್ ನ್ಯಾಯಾಧೀಶ ವಿನಯ್ ವಿ ಕುಂದಾಪುರ, ಮೂರನೆ ಹೆಚ್ಚುವರಿ ಸಿವಿಲ್ ನ್ಯಾಯಾಧೀಶ ರವಿಪ್ರಕಾಶ್ ತಿಪ್ಪಣ್ಣ, ವಕೀಲರ ಸಂಘದ ಸಿದ್ದಾರ್ಥ್, ನಾರಾಯಣ್, ಗೋಪಾಲ್ ಗೌಡ, ವಕೀಲರಾದ ಎಸ್ ಪಿ ವೀರಪ್ಪ, ಕಾಮೇಶ್ ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.