ADVERTISEMENT

ಹೈನುಗಾರಿಕೆ ಸ್ವಾವಲಂಬನೆಯ ಪ್ರತೀಕ

​ಪ್ರಜಾವಾಣಿ ವಾರ್ತೆ
Published 15 ಮಾರ್ಚ್ 2012, 19:30 IST
Last Updated 15 ಮಾರ್ಚ್ 2012, 19:30 IST

ರಾಮನಗರ: ಹೈನುಗಾರಿಕೆಯಿಂದ ಗ್ರಾಮೀಣ ಪ್ರದೇಶದ ಜನತೆ ಸ್ವಾವಲಂಬಿಯಾಗಿ ಬದುಕಲು ಸಾಧ್ಯವಾಗುತ್ತಿದೆ ಎಂದು ಕೆಎಂಎಫ್ ನಿರ್ದೇಶಕ ಪಿ.ನಾಗರಾಜು ಅಭಿಪ್ರಾಯಪಟ್ಟರು.

ಬಿಡದಿ ಹೋಬಳಿ ಸಂಜೀವಯ್ಯನದೊಡ್ಡಿ ಗ್ರಾಮದ ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಕಟ್ಟಡವನ್ನು ಇತ್ತೀಚೆಗೆ ಉದ್ಘಾಟಿಸಿ ಅವರು ಮಾತನಾಡಿದರು.ಪ್ರತಿ ಹಳ್ಳಿಯಲ್ಲಿ ಹಾಲಿನ ಉತ್ಪಾದನೆ ಹೆಚ್ಚಾಗುತ್ತಿದೆ. ಇದು ರೈತರ ಗ್ರಾಮೀಣ ಭಾಗದ ಜನರ ಬದುಕನ್ನು ಸುಭದ್ರಗೊಳಿಸುತ್ತಿದೆ ಎಂದರು.
ಅಧ್ಯಕ್ಷತೆ ವಹಿಸಿದ್ದ ಸಂಘದ ಅಧ್ಯಕ್ಷ ಸಿ.ಪಿ. ಪ್ರಕಾಶ್ ಮಾತನಾಡಿದರು.

ರಾಮನಗರ ಶಿಬಿರದ ಉಪ ವ್ಯವಸ್ಥಾಪಕ ಮಾಯಣ್ಣ, ವಿಸ್ತರಣಾಧಿಕಾರಿಗಳಾದ ಕೆ.ಎಂ ನಂಜಯ್ಯ, ರಮೇಶ್, ಮುಖಂಡ ಹೊನ್ನಶೆಟ್ಟಿ, ನಿರ್ದೇಶಕರಾದ ಮಹೇಶ್, ರಾಘವೇಂಧ್ರ, ಕೆ. ವೇಣುಗೋಪಾಲ್, ಕೃಷ್ಣಪ್ಪ., ವೇಣುಗೋಪಾಲ್, ಬಾಬುರೆಡ್ಡಿ, ರಾಜಮ್ಮ, ಆಂಜನಪ್ಪ, ಕಾರ್ಯದರ್ಶಿ ಲಕ್ಷ್ಮಿ ಶ್ರೀನಿವಾಸ್ ಮುಂತಾದವರು ಇದ್ದರು.
 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.