ADVERTISEMENT

ಹೋಳಿಯ ಬಣ್ಣದಲ್ಲಿ ಮಿಂದೆದ್ದ ಜನ

​ಪ್ರಜಾವಾಣಿ ವಾರ್ತೆ
Published 17 ಮಾರ್ಚ್ 2014, 10:58 IST
Last Updated 17 ಮಾರ್ಚ್ 2014, 10:58 IST

ಚನ್ನಪಟ್ಟಣ: ನಗರದಲ್ಲಿ ರಂಗಿನ ಹೋಳಿ ಹಬ್ಬವನ್ನು ಸಡಗರ ಸಂಭ್ರಮದಿಂದ ಆಚರಿಸಲಾಯಿತು. ಪಟ್ಟಣದ ಮಂಡೀಪೇಟೆಯ ಕಾಮಣ್ಣನ ಸರ್ಕಲ್ ಬಳಿ ಹೋಳಿ ಹಬ್ಬದ ಪ್ರಯುಕ್ತ ಯುವಕರು ಪರಸ್ಪರ ಬಣ್ಣ ಎರಚಿ ಸಂಭ್ರಮಿಸಿದರು. ಪಟ್ಟಣದ ಹಲವೆಡೆ ಯುವಕರು, ಮಧ್ಯ ವಯಸ್ಕರು, ಯುವತಿಯರು, ಮಹಿಳೆಯರು ಬಣ್ಣದಾಟದಲ್ಲಿ ತೊಡಗಿದ್ದ ದೃಶ್ಯ ಸಾಮಾನ್ಯವಾಗಿತ್ತು.

ಪಟ್ಟಣದ ಮಂಡೀಪೇಟೆಯ ಕಾಮಣ್ಣನ ಸಮಿತಿ­ಯವರು ರತಿ ಕಾಮಣ್ಣನ ಪ್ರತಿಮೆಗಳನ್ನು ತಯಾರಿಸಿ ಪಟ್ಟಣದ ಹಲವು ರಸ್ತೆಗಳಲ್ಲಿ ಮೆರವಣಿಗೆ ನಡೆಸಿ ಅದನ್ನು ದಹಿಸುವ ಮೂಲಕ ಹೋಳಿ ಹಬ್ಬಕ್ಕೆ ಮೆರುಗು ತಂದರು. ಹಬ್ಬದ ಪ್ರಯುಕ್ತ ಪಟ್ಟಣದ ಎಂ.ಜಿ ರಸ್ತೆ ಸೇರಿದಂತೆ ಎಲ್ಲ ರಸ್ತೆಗಳ ವ್ಯಾಪಾರಸ್ಥರು ತಮ್ಮ ಅಂಗಡಿ ಮುಂಗಟ್ಟು, ಹೋಟೆಲ್‌ಗಳನ್ನು ಸ್ವಯಂಪ್ರೇರಿತರಾಗಿ ಮುಚ್ಚಿ ಹೋಳಿ ಆಚರಣೆಯಲ್ಲಿ ತೊಡಗಿದ್ದರು.

ಯಾವುದೇ ಅಹಿತಕರ ಘಟನೆ ನಡೆಯ­ದಂತೆ ಪುರ ಪೊಲೀಸರು ಮುನ್ನೆಚ್ಚರಿಕೆ ಕ್ರಮವಾಗಿ ಪಟ್ಟ­ಣದಾದ್ಯಂತ ಬಿಗಿ ಪೊಲೀಸ್ ಭದ್ರತೆ ಏರ್ಪಡಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.