ADVERTISEMENT

‘ವಿದ್ಯಾರ್ಥಿಗಳಲ್ಲಿ ಹೆಚ್ಚುತ್ತಿರುವ ದುಶ್ಚಟ’

​ಪ್ರಜಾವಾಣಿ ವಾರ್ತೆ
Published 23 ಡಿಸೆಂಬರ್ 2013, 10:24 IST
Last Updated 23 ಡಿಸೆಂಬರ್ 2013, 10:24 IST

ಚನ್ನಪಟ್ಟಣ: ಇತ್ತೀಚಿನ ದಿನಗಳಲ್ಲಿ ವಿದ್ಯಾರ್ಥಿಗಳು ದುಶ್ಚಟಕ್ಕೆ ಬಲಿಯಾಗುವುದು ಹೆಚ್ಚಾಗು ತ್ತಿದ್ದು, ಶಿಕ್ಷಕರು ಅಂತಹ ಮಕ್ಕಳನ್ನು ಗಮನಿಸಿ ಅವರನ್ನು ಸರಿದಾರಿಗೆ ತರಲು ಮುಂದಾಗಬೇಕು ಎಂದು ರಾಜ್ಯ ಒಕ್ಕಲಿ ಗರ ಸಂಘದ ಉಪಾಧ್ಯಕ್ಷ ಪ್ರೊ.ಕೆ. ಮಲ್ಲಯ್ಯ ಹೇಳಿದರು.

ತಾಲ್ಲೂಕಿನ ಮುದಗೆರೆ ನಿಸರ್ಗ ಶಾಲೆ ಯಲ್ಲಿ ಇತ್ತೀಚಿಗೆ ಏರ್ಪಡಿಸಿದ್ದ ಮೂರನೆ ವರ್ಷದ ವಾರ್ಷಿಕೋತ್ಸವ ಕಾರ್ಯಕ್ರಮ ವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಶಿಕ್ಷಕರು ಮಹನೀಯರ ವಿಚಾರವನ್ನು ವಿದ್ಯಾರ್ಥಿಗಳಿಗೆ ತಿಳಿಸುವ ಮೂಲಕ ಅವರನ್ನು ಉತ್ತಮ ವ್ಯಕ್ತಿಗಳನ್ನಾಗಿಸ ಬೇಕು ಎಂದರು.
ಇದೇ ಸಂದರ್ಭದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದ ನಿವೃತ್ತ ಶಿಕ್ಷಕ ಮರಿ ಮಲ್ಲಯ್ಯ, ಮಹನೀಯ ಆದರ್ಶಗಳನ್ನು ಅಂಥವರ ತತ್ವ, ಸಿದ್ಧಾಂತಗಳನ್ನು ವಿದ್ಯಾರ್ಥಿಗಳು ತಮ್ಮ ಬದುಕಿನಲ್ಲಿ ಅಳವಡಿಸಿಕೊಳ್ಳುವ ಮೂಲಕ ಉನ್ನತ ಮಟ್ಟದ ಸಾಧನೆ ಮಾಡಬೇಕು ಎಂದರು.

ಡಾ.ನಾರಾಯಣ, ಮಾರೇಗೌಡ, ಕೃಷ್ಣ ಮೂರ್ತಿ, ಶಿವಣ್ಣ, ಶ್ರೀಧರ್, ವಿದ್ಯಾ ಸಂಸ್ಥೆಯ ಕಾರ್ಯದರ್ಶಿ ಎಂ.ಎಚ್. ಸುನೀಲ್, ಅಧ್ಯಕ್ಷೆ ಪ್ರತಿಮಾ, ಗೌರವಾ ಧ್ಯಕ್ಷೆ ಸುನಂದ ಹಾಜರಿದ್ದರು.

ಇದೇ ಸಂದರ್ಭದಲ್ಲಿ ವಿವಿಧ ಸ್ಪರ್ಧೆ ಗಳಲ್ಲಿ ಭಾಗವಹಿಸಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾ ಯಿತು. ವಿದ್ಯಾರ್ಥಿಗಳು ಸಾಂಸ್ಕೃತಿಕ ಕಾರ್ಯಕ್ರಮ ನಡೆಸಿಕೊಟ್ಟರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.