ADVERTISEMENT

ರಾಮನಗರ: 116 ಮಂದಿಗೆ ಕೊರೊನಾ ಸೋಂಕು

​ಪ್ರಜಾವಾಣಿ ವಾರ್ತೆ
Published 19 ಆಗಸ್ಟ್ 2020, 16:19 IST
Last Updated 19 ಆಗಸ್ಟ್ 2020, 16:19 IST
ಕೋವಿಡ್
ಕೋವಿಡ್   

ರಾಮನಗರ: ಜಿಲ್ಲೆಯಲ್ಲಿ ಬುಧವಾರ 116 ಮಂದಿಯಲ್ಲಿ ಕೋವಿಡ್ ಸೋಂಕು ದೃಢವಾಗಿದೆ.

ಚನ್ನಪಟ್ಟಣ 42, ಕನಕಪುರ 32, ಮಾಗಡಿ 7 ಮತ್ತು ರಾಮನಗರ 35 ಪ್ರಕರಣಗಳು ಇದರಲ್ಲಿ ಸೇರಿವೆ. ಇದರಿಂದಾಗಿ ಸೋಂಕಿತರ ಒಟ್ಟು ಸಂಖ್ಯೆ 2496ಕ್ಕೆ ಏರಿಕೆಯಾಗಿದೆ. ಚನ್ನಪಟ್ಟಣ 584, ಕನಕಪುರ 512, ಮಾಗಡಿ 388 ಮತ್ತು ರಾಮನಗರದ 1012 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ.

ಸಾವು: ಚನ್ನಪಟ್ಟಣ ತಾಲ್ಲೂಕಿನ 64 ವರ್ಷದ ವ್ಯಕ್ತಿಯೊಬ್ಬರು ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟಿದ್ದಾರೆ. ಇದರಿಂದಾಗಿ ಕೋವಿಡ್‌ನಿಂದ ಸಾವಿಗೀಡಾದವರ ಸಂಖ್ಯೆ 28ಕ್ಕೆ ಏರಿಕೆ ಆಗಿದೆ.

ADVERTISEMENT

ಗುಣಮುಖ: ಚನ್ನಪಟ್ಟಣ ತಾಲ್ಲೂಕಿನಲ್ಲಿ 3, ಕನಕಪುರ ತಾಲ್ಲೂಕಿನಲ್ಲಿ 5 ಹಾಗೂ ರಾಮನಗರ ತಾಲ್ಲೂಕಿನಲ್ಲಿ 7 ಜನ ಸೇರಿ ಒಟ್ಟಾರೆ 15 ಜನರು ಬುಧವಾರ ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿ ಈವರೆಗೆ ಒಟ್ಟು 1665 ಜನರು ಗುಣಮುಖರಾಗಿದ್ದಾರೆ. ಇನ್ನೂ 803 ಜನರು ಚಿಕಿತ್ಸೆ ಪಡೆಯುತ್ತಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.