ADVERTISEMENT

25ರಿಂದ ಗ್ರಾ.ಪಂ. ಸದಸ್ಯರುಗಳ ಸಭೆ

​ಪ್ರಜಾವಾಣಿ ವಾರ್ತೆ
Published 19 ಅಕ್ಟೋಬರ್ 2012, 4:25 IST
Last Updated 19 ಅಕ್ಟೋಬರ್ 2012, 4:25 IST

ರಾಮನಗರ: ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಹುದ್ದೆಗಳಿಗೆ ಎರಡನೇ ಅವಧಿಗೆ ಮೀಸಲಾತಿಯನ್ನು ನಿಗದಿಪಡಿಸುವ ಸಂಬಂಧವಾಗಿ ಗ್ರಾಮ ಪಂಚಾಯಿತಿ ಸದಸ್ಯರ ಸಭೆಯನ್ನು ಕರೆಯಲಾಗಿದೆ.

ಮಾಗಡಿ ತಾಲ್ಲೂಕಿನ ಗ್ರಾಮ ಪಂಚಾಯಿತಿ ಸದಸ್ಯರುಗಳ ಸಭೆಯನ್ನು ಅ.25 ರಂದು ಬೆಳಿಗ್ಗೆ 11 ಗಂಟೆಗೆ ಮಾಗಡಿ ಪಟ್ಟಣದ ಬಾಲಾಜಿ ಚಿತ್ರಮಂದಿರದಲ್ಲಿ ಕರೆಯಲಾಗಿದೆ.

ಅ.27 ರಂದು ಬೆಳಿಗ್ಗೆ 11 ಗಂಟೆಗೆ ರಾಮನಗರದ ಶ್ರೀರಾಮ ಚಿತ್ರಮಂದಿರದಲ್ಲಿ ರಾಮನಗರ ತಾಲ್ಲೂಕು ಗ್ರಾಮ ಪಂಚಾಯಿತಿ ಸದಸ್ಯರುಗಳ ಸಭೆ ಕರೆಯಲಾಗಿದೆ. ಅ.30 ರಂದು ಬೆಳಿಗ್ಗೆ 11 ಗಂಟೆಗೆ ಚನ್ನಪಟ್ಟಣದ ಶಿವಾನಂದ ಚಿತ್ರಮಂದಿರದಲ್ಲಿ ಚನ್ನಪಟ್ಟಣ ತಾಲ್ಲೂಕು ಗ್ರಾಮ ಪಂಚಾಯಿತಿ ಸದಸ್ಯರ ಸಭೆ ಹಾಗೂ ಅ.31 ರಂದು ಬೆಳಿಗ್ಗೆ 11 ಗಂಟೆಗೆ ಕನಕಪುರ ವಾಣಿ ಚಿತ್ರಮಂದಿರದಲ್ಲಿ ಕನಕಪುರ ತಾಲ್ಲೂಕು ಗ್ರಾಮ ಪಂಚಾಯಿತಿ ಸದಸ್ಯರ ಸಭೆ ಕರೆಯಲಾಗಿದೆ.

ಆಯಾ ತಾಲ್ಲೂಕಿನ ಗ್ರಾಮ ಪಂಚಾಯಿತಿ ಸದಸ್ಯರು ತಮಗೆ ನಿಗದಿಪಡಿಸಿರುವ ದಿನದಂದು ಸಭೆಗೆ ಹಾಜರಾಗಬೇಕು ಎಂದು ಜಿಲ್ಲಾಧಿಕಾರಿ ವಿ.ಶ್ರೀರಾಮರೆಡ್ಡಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.