ರಾಮನಗರ: ಜಿಲ್ಲೆಯಲ್ಲಿ ಸೋಮವಾರ 27 ಮಂದಿ ಕೋವಿಡ್ ರೆಫರಲ್ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಹೊಸತಾಗಿ ಯಾರೊಬ್ಬರಲ್ಲೂ ಕೋವಿಡ್-19 ಸೋಂಕು ಕಾಣಿಸಿಕೊಂಡಿಲ್ಲ.
ಜಿಲ್ಲೆಯಲ್ಲಿ ಈವರೆಗೆ ಒಟ್ಟು 150 ಮಂದಿಯಲ್ಲಿ ಸೋಂಕು ಪತ್ತೆಯಾಗಿದ್ದು, ಇದರಲ್ಲಿ 71 ಮಂದಿ ಗುಣಮುಖರಾಗಿದ್ದಾರೆ. ರಾಮನಗರ ಆಸ್ಪತ್ರೆಯಲ್ಲಿ 47 ರೋಗಿಗಳು ಚಿಕಿತ್ಸೆ ಪಡೆಯುತ್ತಿದ್ದಾರೆ. ಸೋಮವಾರ ಹೊಸತಾಗಿ 168 ಮಾದರಿಗಳನ್ನು ಸಂಗ್ರಹಿಸಿ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. ಇದನ್ನೂ ಸೇರಿಸಿ ಇನ್ನೂ 1482 ಮಾದರಿಗಳ ವರದಿ ಬರಬೇಕಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.