ರಾಮನಗರ: ಜಿಲ್ಲೆಯಲ್ಲಿ ಗುರುವಾರ47 ಮಂದಿಯಲ್ಲಿ ಕೋವಿಡ್ ಸೋಂಕು ದೃಢವಾಗಿದೆ.
ಚನ್ನಪಟ್ಟಣ 15, ಮಾಗಡಿ 6 ಮತ್ತು ರಾಮನಗರ 26 ಪ್ರಕರಣಗಳು ಇದರಲ್ಲಿ ಸೇರಿವೆ. ಇದುವರೆಗೆ ಜಿಲ್ಲೆಯಲ್ಲಿ 4770 ಪ್ರಕರಣಗಳು ದಾಖಲಾಗಿವೆ. ಈ ಪೈಕಿ ಚನ್ನಪಟ್ಟಣ 1135, ಕನಕಪುರ 959, ಮಾಗಡಿ 738 ಮತ್ತು ರಾಮನಗರ 1938 ಪ್ರಕರಣಗಳು ವರದಿಯಾಗಿವೆ.
ಗುಣಮುಖ: ಚನ್ನಪಟ್ಟಣ ತಾಲ್ಲೂಕಿನಲ್ಲಿ 8, ಕನಕಪುರ ತಾಲ್ಲೂಕಿನಲ್ಲಿ 4, ಮಾಗಡಿ ತಾಲ್ಲೂಕಿನಲ್ಲಿ 8 ಹಾಗೂ ರಾಮನಗರ ತಾಲ್ಲೂಕಿನಲ್ಲಿ 11 ಜನ ಸೇರಿ ಒಟ್ಟಾರೆ 31 ಜನರು ಗುರುವಾರ ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿ ಈವರೆಗೆ ಒಟ್ಟು 3889 ಜನರು ಗುಣಮುಖರಾಗಿದ್ದಾರೆ. ಇನ್ನೂ 829 ಜನರು ಚಿಕಿತ್ಸೆ ಪಡೆಯುತ್ತಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.