ರಾಮನಗರ: ಜಿಲ್ಲೆಯಲ್ಲಿ ಮಂಗಳವಾರ 48 ಮಂದಿಯಲ್ಲಿ ಕೋವಿಡ್ ಸೋಂಕು ದೃಢವಾಗಿದೆ.
ಚನ್ನಪಟ್ಟಣ 8, ಕನಕಪುರ 20, ಮಾಗಡಿ 7 ಮತ್ತು ರಾಮನಗರ 13 ಪ್ರಕರಣಗಳು ಇದರಲ್ಲಿ ಸೇರಿವೆ. ಇದುವರೆಗೆ ಜಿಲ್ಲೆಯಲ್ಲಿ 5162 ಪ್ರಕರಣಗಳು ದಾಖಲಾಗಿವೆ. ಈ ಪೈಕಿ ಚನ್ನಪಟ್ಟಣ 1236, ಕನಕಪುರ 1070, ಮಾಗಡಿ 789 ಮತ್ತು ರಾಮನಗರ 2067 ಪ್ರಕರಣಗಳು ಸೇರಿವೆ.
ಗುಣಮುಖ: ಚನ್ನಪಟ್ಟಣ ತಾಲ್ಲೂಕಿನಲ್ಲಿ 9, ಕನಕಪುರ ತಾಲ್ಲೂಕಿನಲ್ಲಿ 11, ಮಾಗಡಿ ತಾಲ್ಲೂಕಿನಲ್ಲಿ 4 ಹಾಗೂ ರಾಮನಗರ ತಾಲ್ಲೂಕಿನಲ್ಲಿ 6 ಸೇರಿ ಒಟ್ಟಾರೆ 30 ಜನರು ಮಂಗಳವಾರ ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿ ಈವರೆಗೆ ಒಟ್ಟು 4238 ಜನರು ಗುಣಮುಖರಾಗಿದ್ದಾರೆ. ಇನ್ನೂ 871 ಜನರು ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.