ADVERTISEMENT

ಆರು ಮಂದಿಯ ವರದಿಗಳೂ ನೆಗೆಟಿವ್‌

​ಪ್ರಜಾವಾಣಿ ವಾರ್ತೆ
Published 31 ಮಾರ್ಚ್ 2020, 13:48 IST
Last Updated 31 ಮಾರ್ಚ್ 2020, 13:48 IST

ರಾಮನಗರ: ಜಿಲ್ಲೆಯಿಂದ ಪರೀಕ್ಷೆಗೆ ಕಳುಹಿಸಲಾಗಿದ್ದ ಆರು ಮಂದಿ ಕೊರೊನಾ ಶಂಕಿತರ ವರದಿಗಳು ನೆಗೆಟಿವ್‌ ಆಗಿದ್ದು, ಜನರು ನಿಟ್ಟುಸಿರು ಬಿಡುವಂತೆ ಆಗಿದೆ.

ಕೇರಳದ ವ್ಯಕ್ತಿ, ಕನಕಪುರದ ಕ್ಯಾಬ್‌ ಚಾಲಕನ ಗಂಟಲು ದ್ರವ ಹಾಗೂ ರಕ್ತದ ಮಾದರಿಯನ್ನು ಆರೋಗ್ಯ ಇಲಾಖೆಯ ಅಧಿಕಾರಿಗಳು ಪರೀಕ್ಷೆಗೆ ಕಳುಹಿಸಿದ್ದರು. ಅಂತೆಯೇ ಬೆಂಗಳೂರಿನಿಂದ ಕನಕಪುರ ತಾಲ್ಲೂಕಿನ ಗ್ರಾಮವೊಂದಕ್ಕೆ ವಾಪಸ್‌ ಆಗಿದ್ದ ಒಂದೇ ಕುಟುಂಬದ ನಾಲ್ವರ ಮಾದರಿಗಳನ್ನೂ ಪರೀಕ್ಷೆಗೆ ಕಳುಹಿಸಲಾಗಿತ್ತು. ಎಲ್ಲವೂ ನೆಗೆಟಿವ್‌ ಆಗಿವೆ. ಕನಕಪುರದ ಒಂದೇ ಕುಟುಂಬದವರನ್ನು ಪರೀಕ್ಷೆಗೆ ಒಳಪಡಿಸಿದ ಕಾರಣ ತಾಲ್ಲೂಕಿನ ಜನರಲ್ಲಿ ಆತಂಕ ಉಂಟಾಗಿತ್ತು. ಈ ಬಗ್ಗೆ ಸಾಕಷ್ಟು ವದಂತಿಗಳು ಹರಡಿದ್ದವು. ಈ ಎಲ್ಲಕ್ಕೂ ಆರೋಗ್ಯ ಇಲಾಖೆಯ ಅಧಿಕಾರಿಗಳು ತೆರೆ ಎಳೆದಿದ್ದಾರೆ.

"ಜಿಲ್ಲೆಯಲ್ಲಿ ಈವರೆಗೆ ಒಂಭತ್ತು ಮಂದಿಯನ್ನು ಪರೀಕ್ಷೆಗೆ ಒಳಪಡಿಸಲಾಗಿದ್ದು, ಎಲ್ಲ ವರದಿಗಳೂ ನೆಗೆಟಿವ್‌ ಆಗಿವೆ. ಸಾರ್ವಜನಿಕರು ಭಯ ಪಡುವ ಅಗತ್ಯ ಇಲ್ಲ’ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ನಿರಂಜನ್‌ ತಿಳಿಸಿದರು.

ADVERTISEMENT

ಜಿಲ್ಲೆಯಲ್ಲಿ ಈವರೆಗೆ232 ಮಂದಿಯನ್ನು ಹೋಮ್‌ ಕ್ಯಾರಂಟೈನ್‌ಗೆ ಒಳಡಿಸಲಾಗಿದೆ. ಇದರಲ್ಲಿ34 ಮಂದಿ28 ದಿನಗಳ ಅವಧಿಯನ್ನು ಹಾಗೂ118 ಮಂದಿ14 ದಿನಗಳ ನಿಗಾ ಅವಧಿಯನ್ನು ಪೂರ್ಣಗೊಳಿಸಿದ್ದಾರೆ. ಸದ್ಯ66 ಮಂದಿ ಕ್ಯಾರಂಟೈನ್‌ನಲ್ಲಿ ಇದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.