ADVERTISEMENT

ಮಾಗಡಿ: ಒಂದೇ ದಿನ 68 ಮಂದಿಗೆ ಸೋಂಕು

​ಪ್ರಜಾವಾಣಿ ವಾರ್ತೆ
Published 4 ಮೇ 2021, 4:47 IST
Last Updated 4 ಮೇ 2021, 4:47 IST

ಮಾಗಡಿ: ಪಟ್ಟಣ ಮತ್ತು ತಾಲ್ಲೂಕಿನಲ್ಲಿ ಸೋಮವಾರ 68 ಜನರಿಗೆ ಕೋವಿಡ್‌ ಸೋಂಕು ದೃಢಪಟ್ಟಿದೆ.

ಗುಡ್ಡಹಳ್ಳಿಯಲ್ಲಿ ಸೋಂಕಿನಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಅಣ್ಣ, ತಂಗಿ ಮತ್ತು ಎನ್‌ಇಎಸ್‌ ಬಡಾವಣೆಯಲ್ಲಿ ವ್ಯಕ್ತಿ, ಮೋಟಗೊಂಡನಹಳ್ಳಿ ವ್ಯಕ್ತಿ ಹಾಗೂ ಕರಗದಹಳ್ಳಿಯಲ್ಲಿ ಮಹಿಳೆ ಬಲಿಯಾಗಿದ್ದಾರೆ. ನಿತ್ಯ ಕೋವಿಡ್‌ ಸೋಂಕು ಹರಡುವುದು ಜಾಸ್ತಿಯಾಗುತ್ತಿದ್ದರೂ ಪಟ್ಟಣದಲ್ಲಿ ಜನರು ಬೇಕಾಬಿಟ್ಟಿಯಾಗಿ ಅಲೆದಾಡುವುದು ನಿಂತಿಲ್ಲ. ಜನಸಾಮಾನ್ಯರು ಸ್ವಯಂಪ್ರೇರಣೆಯಿಂದ ಕೊರೊನಾ ಸೋಂಕು ನಿಯಂತ್ರಣಕ್ಕೆ ಮುಂದಾಗಬೇಕಿದೆ.

‘ಕೋವಿಡ್‌ ನಿಯಮ ಉಲ್ಲಂಘಿಸಿ ಓಡಾಡುತ್ತಿದ್ದ 10 ವಾಹನಗಳನ್ನು ವಶಪಡಿಸಿಕೊಂಡಿದ್ದು, ರಾಮರಾಜ ಅರಸ್‌ ರಸ್ತೆಯಲ್ಲಿ ದಿನಸಿ ಅಂಗಡಿ ಮಾಲೀಕರ ಮೇಲೆ ಪ್ರಕರಣ ದಾಖಲಿಸಿದ್ದೇವೆ’ ಎಂದು ಪಿಎಸ್‌ಐ ಶ್ರೀಕಾಂತ್‌ ತಿಳಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.