ರಾಮನಗರ: ಜಿಲ್ಲೆಯಲ್ಲಿ ಮಂಗಳವಾರ ಒಟ್ಟು 82 ಕೋವಿಡ್-19 ಪಾಸಿಟಿವ್ ಪ್ರಕರಣಗಳು ವರದಿಯಾಗಿದೆ.
ಚನ್ನಪಟ್ಟಣ 20, ಕನಕಪುರ 25, ಮಾಗಡಿ 2 ಮತ್ತು ರಾಮನಗರ 35 ಪ್ರಕರಣಗಳು ಸೇರಿವೆ. ಇವರನ್ನು ರಾಮನಗರ ಜಿಲ್ಲೆಯ ವ್ಯಾಪ್ತಿಗೆ ಒಳಪಡುವ ವಿವಿಧ ಕೋವಿಡ್-19 ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ.
ಇದುವರೆಗೆ ಜಿಲ್ಲೆಯಲ್ಲಿ 1355 ಪ್ರಕರಣಗಳು ದಾಖಲಾಗಿವೆ. ಈ ಪೈಕಿ ಚನ್ನಪಟ್ಟಣ 312, ಕನಕಪುರ 267, ಮಾಗಡಿ 265 ಮತ್ತು ರಾಮನಗರ 511 ಪ್ರಕರಣಗಳು ಸೇರಿವೆ.
ಮಂಗಳವಾರ ಮಾಗಡಿ ತಾಲ್ಲೂಕಿನಲ್ಲಿ 6 ಜನರು ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿ ಈವರೆಗೆ ಒಟ್ಟು 572 ಜನರು ಗುಣಮುಖರಾಗಿದ್ದಾರೆ. ಈ ಪೈಕಿ ಚನ್ನಪಟ್ಟಣ 101, ಕನಕಪುರ 145, ಮಾಗಡಿ 155 ಮತ್ತು ರಾಮನಗರದ 171 ಜನರು ಸೇರಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.